ವಿಜಯಪುರ: ಜ.19 ರಂದು ಕಲಬುರಗಿ ಜಿಲ್ಲೆಯ ಸೇಡಂನಲ್ಲಿ ಡಬಲ್ ಎಂಜಿನ್ ಸರ್ಕಾರದಿಂದ ಕಲಬುರಗಿ ಜಿಲ್ಲೆಯ ಸೇಡಂನಲ್ಲಿ ಗಿನ್ನಿಸ್ ದಾಖಲೆ ಬರೆಯಲಿರುವ ಲಂಬಾಣಿ ತಾಂಡಾಗಳಿಗೆ ಕಂದಾಯ ಗ್ರಾಮದ ಮಾನ್ಯತೆ, ಹಕ್ಕುಪತ್ರ ವಿತರಿಸಲಾಗುತ್ತದೆ. ಈ ಐತಿಹಾಸಿಕ ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಚಾಲನೆ ನೀಡಲಿದ್ದಾರೆ ಎಂದು ಶಾಸಕ ಪಿ.ರಾಜೀವ ಹೇಳಿದರು.
ಸೋಮವಾರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಲಂಬಾಣಿ ತಾಂಡಾಗಳನ್ನು ಕಂದಾಯ ಗ್ರಾಮಗಳಾಗಿ ಪರಿವರ್ತನೆ ಮಾಡುವ ಮೂಲಕ ಬಿಜೆಪಿ ಸರ್ಕಾರ ಐತಿಹಾಕಿ ಕೆಲಸಕ್ಕೆ ಮುಂದಾಗಿದೆ ಎಂದರು.
ಕೇಂದ್ರ ಸರ್ಕಾರದ ಸ್ವಾಮಿತ್ವ ಯೋಜನೆ ಅನುಷ್ಠಾನದಿಂದ ರಾಜ್ಯ ಸರ್ಕಾರ ಡ್ರೋಣ ಮೂಲಕ ತಾಂಡಾಗಳನ್ನು ಸರ್ವೇ ಮಾಡಿ, ಕಂದಾಯ ಗ್ರಾಮಗಳಾಗಿ ಪರಿವರ್ತಿಸಲು ಸಾಧ್ಯವಾಗಿದೆ. ಇದು ಡಬಲ್ ಎಂಜಿನ್ ಸರ್ಕಾರದ ಐತಿಹಾಸಿಕ ಸಾಧನೆ ಎಂದು ಬಣ್ಣಿಸಿದರು.
ಇದನ್ನೂ ಓದಿ:ನಾಯಕಿ ಎಂದು ಸ್ವಘೋಷಣೆ ಮಾಡಿಕೊಳ್ಳುತ್ತಿರುವುದು ವಿಪರ್ಯಾಸ: ಪ್ರಿಯಾಂಕಾ ಗಾಂಧಿಗೆ ಸಿಎಂ ಟಾಂಗ್
ಕಲಬುರ್ಗಿ, ರಾಯಚೂರು, ಯಾದಗಿರಿ ಹಾಗೂ ವಿಜಯಪುರ ಜಿಲ್ಲೆಯ ಗಡಿ ತಾಂಡಾಗಳು ಸೇರಿದಂತೆ 50 ಸಾವಿರ ಕುಟುಂಬಗಳಿಗೆ ಹಕ್ಕುಪತ್ರ ವಿತರಣೆ, 250 ತಾಂಡಾಗಳು ಕಂದಾಯ ಗ್ರಾಮಳಾಗಿ ಪರಿವರ್ತಿಸುವ ಅನುಷ್ಠಾನ. ಪ್ರತಿ ಕುಟುಂಬದ ಇಬ್ಬರನ್ನು ಒಂದೇ ವೇದಿಕೆಗೆ 1 ಲಕ್ಷ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಿಸಲಾಗುತ್ತದೆ ಎಂದು ವಿವರಿಸಿದರು.
ಬಿಜೆಪಿ ಜಿಲ್ಲಾಧ್ಯಕ್ಷ ಆರ್.ಎಸ್. ಪಾಟೀಲ ಕುಚಬಾಳ, ಡಾ.ಸುರೇಶ ಬಿರಾದಾರ, ಡಾ.ಬಾಬುರಾಜೇಂದ್ರ ನಾಯಕ, ಬಸವರಾಜ ಬಿರಾದಾರ, ಶಿವರುದ್ರ ಬಾಗಲಕೋಟ, ರಾಜು ಜಾಧವ, ವಿಜಯ ಜೋಶಿ ಸೇರಿದಂತೆ ಇತರರು ಉಪಸ್ಥಿತರಿದ್ದರು.