Advertisement
ಬುಧವಾರ ತಮ್ಮ ಗೃಹ ಕಚೇರಿ “ಕೃಷ್ಣಾ’ದಲ್ಲಿ ಕರೆದಿದ್ದ ಉನ್ನತ ಶಿಕ್ಷಣ ಇಲಾಖೆಯ ಪ್ರಗತಿ ಪರೀಶೀಲನೆ ಸಭೆಯಲ್ಲಿ ಮುಖ್ಯಮಂತ್ರಿಗಳು ಸರಕಾರಿ ವಿ.ವಿ. ಮತ್ತು ಪ್ರಥಮ ದರ್ಜೆ ಕಾಲೇಜುಗಳಲ್ಲಿ ಬೋಧಕ ಹುದ್ದೆಗಳನ್ನು ಭರ್ತಿ ಮಾಡುವ ಪ್ರಸ್ತಾವನೆಗಳ ಮೇಲೆ ಆದ್ಯತೆಯ ಮೇರೆಗೆ ಅನುಮೋದನೆ ನೀಡುವಂತೆ ಹಣಕಾಸು ಇಲಾಖೆಗೆ ಸೂಚನೆ ನೀಡಿದ್ದಾರೆ.
Related Articles
Advertisement
20 ಕಾರ್ಪೊರೆಟ್ ಸಂಸ್ಥೆಗಳೊಂದಿಗೆ ಒಡಂಬಡಿಕೆಬಜೆಟ್ನಲ್ಲಿ ಉನ್ನತ ಶಿಕ್ಷಣಕ್ಕೆ ನೀಡಲಾಗಿರುವ 5862 ಕೋಟಿ ರೂ.ಗಳಲ್ಲಿ ಈವರೆಗೆ 3,713.73 ಕೋಟಿ ರೂ. ವೆಚ್ಚ ಮಾಡಲಾಗಿದ್ದು, ಶೇ.72.87 ಪ್ರಗತಿ ಸಾಧಿಸಲಾಗಿದೆ. 30 ಕೋಟಿ ರೂ. ವೆಚ್ಚದಲ್ಲಿ 21 ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು 9 ಮಹಿಳಾ ಪಾಲಿಟೆಕ್ನಿಕ್ಗಳನ್ನು ಉನ್ನತೀಕರಿಸುವ ಕಾರ್ಯ ನಡೆಯುತ್ತಿದೆ. ಕಾರ್ಪೊರೆಟ್ ಸಂಸ್ಥೆಗಳ ಸಾಮಾಜಿಕ ಹೊಣೆಗಾರಿಕೆ ನಿಧಿ ಅಡಿಯಲ್ಲಿ 20 ಕಾರ್ಪೊರೆಟ್ ಸಂಸ್ಥೆಗಳೊಂದಿಗೆ ಒಡಂಬಡಿಕೆ ಮಾಡಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ಮುಖ್ಯಮಂತ್ರಿಗಳಿಗೆ ಮಾಹಿತಿ ನೀಡಿದರು. ಇನ್ನು ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಮೂಲ ಸೌಕರ್ಯ ಅಭಿವೃದ್ಧಿಗೆ ಬಜೆಟ್ನಲ್ಲಿ 250 ಕೋಟಿ ರೂ. ಒದಗಿಸಲಾಗಿದ್ದು, ಇದನ್ನು ಪೂರ್ಣ ಪ್ರಮಾಣದಲ್ಲಿ ಬಳಕೆ ಮಾಡಬೇಕು. ಅಪ್ರಂಟಿಸ್ ಶಿಪ್ ಎಂಬೆಡೆಡ್ ಪದವಿ ಕಾರ್ಯಕ್ರಮ ಇನ್ನಷ್ಟು ಕಾಲೇಜುಗಳಿಗೆ ವಿಸ್ತರಿಸಬೇಕು ಎಂದು ಸಿದ್ದರಾಮಯ್ಯ ಸೂಚನೆ ನೀಡಿದರು. ಉನ್ನತ ಶಿಕ್ಷಣ ಪ್ರವೇಶಾತಿ: 12ನೇ ಸ್ಥಾನದಲ್ಲಿ ರಾಜ್ಯ
ಉನ್ನತ ಶಿಕ್ಷಣಕ್ಕೆ ಒಟ್ಟಾರೆ ಪ್ರವೇಶಾತಿ ರಾಜ್ಯದಲ್ಲಿ ಶೇ. 36ರಷ್ಟಿದೆ. ದೇಶದ ಸರಾಸರಿ ಪ್ರವೇಶಾತಿ ಶೇ. 27.30ರಷ್ಟಿದೆ. ಉನ್ನತ ಶಿಕ್ಷಣ ಪ್ರವೇಶಾತಿಯಲ್ಲಿ ರಾಜ್ಯ ಸದ್ಯ ರಾಷ್ಟ್ರಮಟ್ಟದಲ್ಲಿ 12ನೇ ಸ್ಥಾನದಲ್ಲಿದ್ದು, ಇನ್ನಷ್ಟು ಉತ್ತಮಪಡಿಸುವ ನಿಟ್ಟಿನಲ್ಲಿ ಯೋಜನೆಗಳನ್ನು ರೂಪಿಸಬೇಕು ಎಂದು ಅವರು ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ತಾಕೀತು ಮಾಡಿದರು.