ಚಿತ್ರದುರ್ಗ: ಬಯಲು ಸೀಮೆಯ ಅಡಕೆ ಬೆಳೆಗಾರರಿಗೆ ಹನಿ ನೀರಾವರಿ ಸಬ್ಸಿಡಿ ಯೋಜನೆ ನೀಡುವ ಕುರಿತು ಪರಿಶೀಲಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಹೊಳಲ್ಕೆರೆಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ತೋಟಗಾರಿಕಾ ಬೆಳೆಗೆ ಹನಿ ನೀರಾವರಿ ಪದ್ಧತಿ ಅಳವಡಿಸಿಕೊಳ್ಳಲು ಉತ್ತೇಜನ ನೀಡಲಾಗುತ್ತಿದೆ. ಪರಿಶಿಷ್ಟ ಜಾತಿ ಮತ್ತು ಪಗಡದ ರೈತರಿಗೆ ಶೇ 90 ಸಬ್ಸಿಡಿ ಹಾಗೂ ಉಳಿದ ವರ್ಗಕ್ಕೆ ಶೇ 75ರಷ್ಟು ಸಬ್ಸಿಡಿ ಸಿಗುತ್ತಿದೆ. ಈ ಸಹಾಯಧನವನ್ನು ಬಯಲುಸೀಮೆ ಅಡಿಕೆ ಬೆಳೆಗೂ ವಿಸ್ತರಣೆ ಮಾಡುವ ಬಗ್ಗೆ ಪರಿಶೀಲಿಸುವುದಾಗಿ ಹೇಳಿದರು.
ನಗರ ಸ್ಥಳೀಯ ಸಂಸ್ಥೆಗಳ ನೀರಗಂಟಿ ಹಾಗೂ ಸ್ವಚ್ಛತಾ ಸಿಬ್ಬಂದಿ ಸಮಸ್ಯೆ ಗಮನಕ್ಕೆ ಬಂದಿದೆ. ಮುಷ್ಕರಕ್ಕೆ ಮುಂದಾಗಿರುವ ಅವರೊಂದಿಗೆ ಚರ್ಚಿಸಲಾಗುವುದು ಎಂದರು.
ಇದನ್ನೂ ಓದಿ:ಅಮೃತಪಾಲ್ ಸಿಂಗ್ ಎಸ್ಕೇಪ್; ವಾಹನ ಜಪ್ತಿ ಮಾಡಿದ ಪಂಜಾಬ್ ಪೊಲೀಸ್
ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಪ್ರತಿಭಟನೆ ಮಾಡುವವರ ಸಂಖ್ಯೆ ಹೆಚ್ಚಾಗಿದೆ. ಇಂತಹ ಹೋರಾಟವನ್ನು ನಾವೂ ನೋಡುತ್ತಿದ್ದೇವೆ. ಚರ್ಚೆಯ ಮೂಲಕ ಬಗೆಹರಿಸಿಕೊಳ್ಳುವ ಪ್ರಯತ್ನ ಮಾಡಲಿದ್ದೇವೆ’ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯೆ ನೀಡಿದರು.