Advertisement

ನಾಳೆ ಕಾಂಗ್ರೆಸ್‌ ಸೋಲಿನ ಪರಾಮರ್ಶೆ

11:08 PM Jun 24, 2019 | Team Udayavani |

ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಹೀನಾಯ ಸೋಲು ಕಂಡಿರುವ ಕಾಂಗ್ರೆಸ್‌ ಪಕ್ಷದ ಸೋಲಿನ ಆತ್ಮಾವಲೋಕನ ಮಾಡಿಕೊಳ್ಳಲು ನಿರ್ಧರಿಸಿದೆ.

Advertisement

ನಾಳೆ(ಜೂನ್‌ 26) ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ಕೆ.ಸಿ.ವೇಣುಗೋಪಾಲ್‌ ನೇತೃತ್ವದಲ್ಲಿ ಚುನಾವಣೆಯ ಸೋಲಿನ ಕುರಿತು ಪಕ್ಷದ ಹಿರಿಯ ಮುಖಂಡರ ಸಭೆ ಹಾಗೂ 2019 ರ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಕಾಂಗ್ರೆಸ್‌ ಅಭ್ಯರ್ಥಿಗಳ ಪ್ರತ್ಯೇಕ ಸಭೆ ನಡೆಸಲು ತೀರ್ಮಾನಿಸಲಾಗಿದೆ.

ಲೋಕಸಭೆಯಲ್ಲಿ ಕಾಂಗ್ರೆಸ್‌ ನಿರೀಕ್ಷೆಗೂ ಮೀರಿ ಹೀನಾಯ ಸೋಲು ಕಂಡಿರುವುದಕ್ಕೆ ಸೋಲಿನ ಬಗ್ಗೆ ಪಕ್ಷದಲ್ಲಿ ಹಲವು ರೀತಿಯ ವ್ಯಾಖ್ಯಾನಗಳನ್ನು ಮಾಡಲಾಗುತ್ತಿದೆ. ಅಲ್ಲದೇ ರಾಜ್ಯದಲ್ಲಿ ಜೆಡಿಎಸ್‌ ಜೊತೆಗೆ ಮೈತ್ರಿ ಸರ್ಕಾರ ನಡೆಸುತ್ತಿರುವುದರಿಂದ ಸೋಲಿಗೆ ಮೈತ್ರಿಯೂ ಕಾರಣ ಎಂಬ ಮಾತುಗಳು ಕಾಂಗ್ರೆಸ್‌ ವಲಯದಲ್ಲಿ ಕೇಳಿ ಬರುತ್ತಿವೆ.

ಭವಿಷ್ಯದಲ್ಲಿ ಕಾಂಗ್ರೆಸ್‌ ಪಕ್ಷ ಅಸ್ಥಿತ್ವದಲ್ಲಿ ಉಳಿಯಬೇಕೆಂದರೆ, ಜೆಡಿಎಸ್‌ನೊಂದಿಗಿನ ಮೈತ್ರಿ ಕಡಿದುಕೊಳ್ಳುವುದೇ ಉತ್ತಮ ಎಂಬ ಅಭಿಪ್ರಾಯವನ್ನು ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಸೇರಿ ಅನೇಕ ನಾಯಕರು ಹೊಂದಿದ್ದಾರೆ.

ಹೀಗಾಗಿ ರಾಜ್ಯದಲ್ಲಿ ಮೈತ್ರಿ ಸರ್ಕಾರ ಮುಂದುವರಿಸುವುದು, ಪಕ್ಷ ಸಂಘಟನೆ ಹಾಗೂ ಮುಂದಿನ ಹೋರಾಟಗಳ ಕುರಿತು ಅಂದಿನ ಸಭೆಯಲ್ಲಿ ಚರ್ಚೆ ನಡೆಯುವ ಸಾಧ್ಯತೆ ಇದೆ. ಈ ಕುರಿತು ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಮಾಧ್ಯಮಗಳೊಂದಿಗೆ ಮಾತನಾಡಿ, ಜೂ.26 ರಂದು ಕೆ.ಸಿ.ವೇಣುಗೋಪಾಲ್‌ ರಾಜ್ಯಕ್ಕೆ ಆಗಮಿಸಲಿದ್ದಾರೆ.

Advertisement

ಅಂದು ಪಕ್ಷದ ಹಿರಿಯ ನಾಯಕರ ಸಭೆ ನಡೆಯಲಿದ್ದು, ನೂತನ ಪದಾಧಿಕಾರಿಗಳ ಆಯ್ಕೆ ಹಾಗೂ ಪಕ್ಷದ ಮುಂದಿನ ಹೋರಾಟಗಳ ಬಗ್ಗೆ ಚರ್ಚೆ ನಡೆಯಲಿದೆ ಎಂದರು. ಹಾಲಿ ಸಚಿವರ ಕಾರ್ಯವೈಖರಿಯ ಬಗ್ಗೆ ಪಕ್ಷದ ಹಂತದಲ್ಲಿ ಚರ್ಚೆ ನಡೆಯುತ್ತಿದೆ.

ಸರ್ಕಾರ 20 ತಿಂಗಳು ಪೂರೈಸಿದ ನಂತರ ಸಂಪುಟ ಪುನಾರಚನೆ ಮಾಡಲಾಗುವುದು. ಆ ಸಂದರ್ಭದಲ್ಲಿ ಹೊಸಬರಿಗೆ ಅವಕಾಶ ಕಲ್ಪಿಸಲಾಗುವುದು. ಮೈತ್ರಿ ಸರ್ಕಾರದಲ್ಲಿ ಯಾವುದೇ ಗೊಂದಲವಿಲ್ಲ. ಎಲ್ಲವೂ ಸುಸೂತ್ರವಾಗಿ ನಡೆಯುತ್ತಿದೆ ಎಂದು ಹೇಳಿದರು.

ಇನ್ನು ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಗೆದ್ದಿರುವ ಪಕ್ಷದ ಕಾರ್ಯಕರ್ತರಿಗೆ ಜುಲೈ 14 ರಂದು ಸನ್ಮಾನ ಮಾಡಲು ತೀರ್ಮಾನಿಸಲಾಗಿದೆ. ಅದೇ ದಿನ ಕೆಪಿಸಿಸಿ ಅಧ್ಯಕ್ಷರಾಗಿ ತಾವು ಒಂದು ವಷ ì ಪೂರೈಸಿರುವುದರಿಂದ ಅಭಿನಂದನಾ ಸಮಾರಂಭ ಏರ್ಪಡಿಸಲು ಚರ್ಚೆ ನಡೆಲಾಗಿದೆ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next