Advertisement
ಒಂದೆಡೆ ದೇಶದಲ್ಲಿ ಕೋವಿಡ್ ಸೋಂಕಿನ ರೂಪಾಂತರಿ ಅಲೆಯ ಕಾರಣದಿಂದಾಗಿ ಸೋಂಕಿಗೆ ಒಳಗಾದವರಿಗೆ ಆಕ್ಸಿಜನ್ ಕೊರತೆ ಹಾಗೂ ವೈದ್ಯಕೀಯ ಸಿಬ್ಬಂದಿಗಳ ಕೊರತೆ ಇದೆ ಎಂಬ ಆರೋಪಗಳು ಕೇಳಿಬರುತ್ತಿರುವ ಹಿನ್ನೆಲೆಯಲ್ಲಿ ಇಂದು ಕೇಂದ್ರ ಸರ್ಕಾರ ಕೇಂದ್ರ ಸಚಿವ ಸಂಪುಟ ಸಭೆಯನ್ನು ಕರೆದು ದೇಶದಲ್ಲಿನ ಬೇರೆ ಬೇರೆ ರಾಜ್ಯಗಳ ಕೋವಿಡ್ ಸೋಂಕಿನ ಪರಿಸ್ಥಿತಿಯ ಅವಲೋಕನವನ್ನು ಮಾಡಲಾಯಿತು.
Related Articles
Advertisement
ಇನ್ನು, ಈ ಬಗ್ಗೆ ತಮ್ಮ ಅಧಿಕೃತ ಟ್ವೀಟರ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿರುವ ಪ್ರಧಾನಿ ನರೇಂದ್ರ ಮೋದಿ, ಸಚಿವ ಸಂಪುಟ ಸಭೆಯಲ್ಲಿ ದೇಶದ ಕೋವಿಡ್ ಪರಿಸ್ಥಿತಿಯನ್ನು ಪರಿಶೀಲಿಸಲಾಗಿದೆ. ರಾಜ್ಯಗಳೊಂದಿಗೆ ಸಮನ್ವಯ, ವೈದ್ಯಕೀಯ ಸಾಮರ್ಥ್ಯವನ್ನು ಹೆಚ್ಚಿಸುವುದು ಮತ್ತು ಆಮ್ಲಜನಕದ ಲಭ್ಯತೆಯನ್ನು ಹೆಚ್ಚಿಸುವುದು ಸೇರಿದಂತೆ ಕೈಗೊಳ್ಳುತ್ತಿರುವ ವಿವಿಧ ಕ್ರಮಗಳ ಬಗ್ಗೆ ಚರ್ಚಿಸಲಾಯಿತು ಎಂದು ಅವರು ಹಂಚಿಕೊಂಡಿದ್ದಾರೆ.
ಇನ್ನು, ಕಳೆದ 24 ಗಂಟೆಯಲ್ಲ 3,86,452 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು ಈ ಪೈಕಿ 2,97,540 ಜನ ಗುಣ ಮುಖರಾಗಿದ್ದಾರೆ. ಇದರಿಂದ ದೇಶದಲ್ಲಿ ಈವರೆಗೆ ಕೋವಿಡ್ ಸೋಂಕು ಪೀಡಿತರಾದವರ ಸಂಖ್ಯೆ 1,87,62,976ಕ್ಕೆ ಏರಿಕೆ ಆಗಿದೆ. ಇದಲ್ಲದೆ ದಿನದಿಂದ ದಿನಕ್ಕೆ ಕೋವಿಡ್ ಸೋಂಕಿಗೆ ಬಲಿ ಆಗುತ್ತಿರುವವರ ಸಂಖ್ಯೆ ಕೂಡ ಹೆಚ್ಚಾಗಿದ್ದು ದೇಶದಲ್ಲಿ ಇದೀಗ ದಿನ ಒಂದರಲ್ಲಿ ಮೂರು ಸಾವಿರಕ್ಕೂ ಹೆಚ್ಚು ಜನ ಸಾವನ್ನಪ್ಪುತ್ತಿದ್ದಾರೆ. ಗುರುವಾರ 3,498 ಜನರು ಬಲಿ ಆಗಿದ್ದು, ಈವರೆಗೆ ಮಹಾಮಾರಿ ಕೊರೋನಾಗೆ ಬಲಿ ಆದವರ ಸಂಖ್ಯೆ 2,08,330ಕ್ಕೆ ಏರಿಕೆ ಆಗಿದೆ. ಓದಿ : ಕೋವಿಡ್ ಹೆಚ್ಚಳ: ಅಂತರಾಷ್ಟ್ರೀಯ ವಿಮಾನಯಾನ ನಿರ್ಬಂಧ ಮೇ 31ರವರೆಗೆ ವಿಸ್ತರಣೆ