Advertisement
ಸೆ. 9ರಂದು ನಡೆಯಲಿರುವ ಜಿಎಸ್ಟಿ ಕೌನ್ಸಿಲ್ನಲ್ಲಿ ಮಧ್ಯಮ ಮತ್ತು ಕಡಿಮೆ ಆದಾಯದ ಪಾಲಿಸಿದಾರರಿಗಾಗಿ ಆರೋಗ್ಯ ವಿಮೆಯ ಮೇಲಿನ ತೆರಿಗೆಯನ್ನು ಮರು ಪರಿಶೀಲಿಸುವಂತೆ ಮನವಿ ಮಾಡಿದ್ದಾರೆ. 2017ರಿಂದ ಆರೋಗ್ಯ ವಿಮೆಯ ಮೇಲೆ ಶೇ. 18ರಷ್ಟು ಜಿಎಸ್ಟಿ ಹೇರಿದ್ದು, ಇದರಿಂದ ಆರೋಗ್ಯ ವಿಮೆ ದುಬಾರಿಯಾಗಿದೆ.
ದೇಶದಲ್ಲಿ ಆಯುಷ್ಮಾನ್ ಭಾರತ್ ಯೋಜನೆ ಜಾರಿಗೆ ಬರುವ ಮೊದಲೇ ಕರ್ನಾಟಕದಲ್ಲಿ 2018ರಲ್ಲಿ ಆರೋಗ್ಯ ಕರ್ನಾಟಕ ಯೋಜನೆಯನ್ನು ಜಾರಿಗೊಳಿಸಲಾಗಿತ್ತು. ಕೇಂದ್ರ ಸರಕಾರವು 2047ರ ವೇಳೆಗೆ “ಸಾರ್ವತ್ರಿಕ ವಿಮಾ ಕವರೇಜ್’ ಗುರಿಯೊಂದಿಗೆ ರಾಷ್ಟ್ರವ್ಯಾಪಿ ಮಿಷನ್ ಪ್ರಾರಂಭಿಸಿದೆ. ಆದರೆ ಆರೋಗ್ಯ ವಿಮೆಯನ್ನು ಸಂಪೂರ್ಣವಾಗಿ ನಿರಾಕರಿಸುವಷ್ಟು ಹೆಚ್ಚಿನ ದರದಲ್ಲಿ ತೆರಿಗೆ ವಿಧಿಸುವುದು ವಿಪರ್ಯಾಸ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.