Advertisement

Revise Taxation: ಆರೋಗ್ಯ ವಿಮೆ ಜಿಎಸ್‌ಟಿ ಕಡಿತ ಮಾಡಿ: ಪ್ರಧಾನಿಗೆ ಸಚಿವ ದಿನೇಶ್‌ ಪತ್ರ

01:29 AM Sep 07, 2024 | Team Udayavani |

ಬೆಂಗಳೂರು: ಆರೋಗ್ಯ ವಿಮೆಯ ಮೇಲೆ ವಿಧಿಸಿದ ಶೇ. 18ರಷ್ಟು ಜಿಎಸ್‌ಟಿಯನ್ನು ಮರು ಪರಿಶೀಲಿಸುವಂತೆ ಆಗ್ರಹಿಸಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಪತ್ರ ಬರೆದಿದ್ದಾರೆ.

Advertisement

ಸೆ. 9ರಂದು ನಡೆಯಲಿರುವ ಜಿಎಸ್‌ಟಿ ಕೌನ್ಸಿಲ್‌ನಲ್ಲಿ ಮಧ್ಯಮ ಮತ್ತು ಕಡಿಮೆ ಆದಾಯದ ಪಾಲಿಸಿದಾರರಿಗಾಗಿ ಆರೋಗ್ಯ ವಿಮೆಯ ಮೇಲಿನ ತೆರಿಗೆಯನ್ನು ಮರು ಪರಿಶೀಲಿಸುವಂತೆ ಮನವಿ ಮಾಡಿದ್ದಾರೆ. 2017ರಿಂದ ಆರೋಗ್ಯ ವಿಮೆಯ ಮೇಲೆ ಶೇ. 18ರಷ್ಟು ಜಿಎಸ್‌ಟಿ ಹೇರಿದ್ದು, ಇದರಿಂದ ಆರೋಗ್ಯ ವಿಮೆ ದುಬಾರಿಯಾಗಿದೆ.

ಹೆಚ್ಚುತ್ತಿರುವ ವೆಚ್ಚವು ಆರ್ಥಿಕ ದುರ್ಬಲ ವರ್ಗಗಳ ಮೇಲೆ ವಿನಾಶಕಾರಿ ಪರಿಣಾಮ ಬೀರುತ್ತಿದೆ. ಆರೋಗ್ಯ ವಿಮೆ ಖರೀದಿಸಲು ಮುಂದಾಗಬೇಕಿರುವ ಮಧ್ಯಮ ಮತ್ತು ಕೆಳ ಮಧ್ಯಮ ವರ್ಗದವರು ಆರೋಗ್ಯ ವಿಮೆಯಿಂದ ದೂರ ಉಳಿಯುತ್ತಿದ್ದಾರೆ.
ದೇಶದಲ್ಲಿ ಆಯುಷ್ಮಾನ್‌ ಭಾರತ್‌ ಯೋಜನೆ ಜಾರಿಗೆ ಬರುವ ಮೊದಲೇ ಕರ್ನಾಟಕದಲ್ಲಿ 2018ರಲ್ಲಿ ಆರೋಗ್ಯ ಕರ್ನಾಟಕ ಯೋಜನೆಯನ್ನು ಜಾರಿಗೊಳಿಸಲಾಗಿತ್ತು.

ಕೇಂದ್ರ ಸರಕಾರವು 2047ರ ವೇಳೆಗೆ “ಸಾರ್ವತ್ರಿಕ ವಿಮಾ ಕವರೇಜ್‌’ ಗುರಿಯೊಂದಿಗೆ ರಾಷ್ಟ್ರವ್ಯಾಪಿ ಮಿಷನ್‌ ಪ್ರಾರಂಭಿಸಿದೆ. ಆದರೆ ಆರೋಗ್ಯ ವಿಮೆಯನ್ನು ಸಂಪೂರ್ಣವಾಗಿ ನಿರಾಕರಿಸುವಷ್ಟು ಹೆಚ್ಚಿನ ದರದಲ್ಲಿ ತೆರಿಗೆ ವಿಧಿಸುವುದು ವಿಪರ್ಯಾಸ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next