ಮಾನದಂಡದಲ್ಲಿರುವ ಕೆಲವು ಸಮಸ್ಯೆಗಳ ಕಾರಣಗಳಿಂದಾಗಿ ಬರ ಘೋಷಣೆ ವಿಳಂಬ ವಾಗಿದೆ. ಇದನ್ನು ಪರಿಷ್ಕರಿಸ ದಿದ್ದರೆ ಬರಪೀಡಿತ ಪ್ರದೇಶದಲ್ಲಿ ಜನರಿಗೆ ನೆರವಾಗಲು ಸಾಧ್ಯವಾ ಗದು. ಈಗಾಗಲೇ ಇದರ ಅನಿವಾರ್ಯತೆಯನ್ನು ವಿವರಿಸಿ ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಅವರಿಗೆ ಪತ್ರ ಬರೆದಿದ್ದರೂ ಇದುವರೆಗೆ ಉತ್ತರ ಬಂದಿಲ್ಲ. ಮಾನದಂಡಗಳಲ್ಲಿನ ಬದಲಾವಣೆ ಕೇವಲ ಕರ್ನಾಟಕ ರಾಜ್ಯದ ದೃಷ್ಟಿಯಿಂದ ಮಾತ್ರವೇ ಅಲ್ಲ, ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳ ಒಕ್ಕೂಟವಾದ ಭಾರತ ಗಣರಾಜ್ಯದ ಹಿತದೃಷ್ಟಿಯಿಂದಲೂ ಅತ್ಯಗತ್ಯವಾಗಿರುತ್ತದೆ ಎಂದಿದ್ದಾರೆ.
Advertisement
ಹವಾಮಾನ ಆಧಾರಿತ ಕೃಷಿ ವಲಯಕರ್ನಾಟಕವು ವೈವಿಧ್ಯಮಯವಾದ 14 ಕೃಷಿ-ಹವಾಮಾನ ವಲಯಗಳನ್ನು ಹೊಂದಿದ್ದು, ಪ್ರತಿಯೊಂದು ವಲಯವೂ ತನ್ನದೇ ಆದ ಸವಾಲುಗಳನ್ನು ಹೊಂದಿದೆ. ಪ್ರಸಕ್ತ ಇರುವ ಮಾನದಂಡಗಳು ಎಲ್ಲ ವಲಯಗಳಿಗೂ ಏಕರೂಪವಾಗಿದ್ದು, ಇದು ಬರ ಘೋಷಣೆಗೆ ಅಗತ್ಯವಾದ ಸೂಕ್ಷ್ಮಗಳು ಮತ್ತು ಬದಲಾವಣೆಗಳನ್ನು ಒಳಗೊಳ್ಳುವುದಿಲ್ಲ. ಹಾಗಾಗಿ ವಲಯವಾರು ನಿರ್ದಿಷ್ಟವಾದ ಸೂಚ್ಯಂಕಗಳನ್ನು ಬರ ಘೋಷಣೆಗೆ ರೂಪಿಸುವುದು ಅಗತ್ಯವಾಗಿದೆ.
Related Articles
ಬರನಿರ್ವಹಣೆ ಕೈಪಿಡಿ 2016ರ ನಿಯಮಗಳು ಹಾಗೂ ಎಸ್‌ಡಿಆರ್‌ಎಫ್, ಎನ್‌ಡಿಆರ್‌ಎಫ್ ನಿಯಮಾವಳಿಯನ್ನು ಸಮೀಕರಿಸುವ ಅಗತ್ಯವಿದೆ. ಬರ ನಿರ್ವಹಣೆ ಕೈಪಿಡಿಯ ಮಾನದಂಡದಡಿ ಬೆಳೆಹಾನಿ ಸಹಾಯಧನಕ್ಕೆ ಅರ್ಹತೆ ಪಡೆಯಲು ಶೇ.50ರಷ್ಟು ಬೆಳೆಹಾನಿ ಪ್ರಮಾಣ ಅಗತ್ಯವಿರುತ್ತದೆ. ಈ ಪ್ರಮಾಣ ವಿಪತ್ತಿನ ಪರಿಹಾರಕ್ಕೆ ಸಂಬಂಧಿಸಿ ಕೇಂದ್ರ ಗೃಹ ವ್ಯವಹಾರಗಳ ಸಚಿವಾಲಯವು ಎಸ್‌ಡಿಆರ್‌ಎಫ್, ಎನ್‌ಡಿಆರ್‌ಎಫ್ ಮಾನದಂಡಗಳ ಅಡಿ ಸೂಚಿಸಿರುವ ಶೇ.33 ಬೆಳೆ ನಾಶಕ್ಕೆ ವ್ಯತಿರಿಕ್ತವಾಗಿದೆ. ಹಾಗಾಗಿ, ಕೈಪಿಡಿಯ ಮಾನದಂಡವನ್ನು ಇದಕ್ಕೆ ಹೊಂದಾಣಿಕೆ ಮಾಡುವುದು ಸೂಕ್ತವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
Advertisement