Advertisement

Karnataka; ಸರಕಾರಿ ಅಂಗವಿಕಲ ನೌಕರರ ಪ್ರಯಾಣ ಭತ್ತೆ ದರ ಪರಿಷ್ಕರಣೆ

11:31 PM Dec 16, 2024 | Team Udayavani |

ಬೆಂಗಳೂರು: ರಾಜ್ಯ ಸರಕಾರ ಅಂಗವಿಕಲ ಸರಕಾರಿ ನೌಕರರಿಗೆ 7ನೇ ವೇತನ ಆಯೋಗದ ವರದಿಯಂತೆ ವಿಶೇಷ-ಚೇತನ ನೌಕರರಿಗೆ ಪ್ರಯಾಣ ಭತ್ತೆ ಪರಿಷ್ಕರಣೆ ಮಾಡಿ ಆದೇಶ ಹೊರಡಿಸಿದೆ.

Advertisement

2024ರ ಪರಿಷ್ಕೃತ ವೇತನ ಶ್ರೇಣಿಗಳಲ್ಲಿ ಮೂಲ ವೇತನದ ಶೇ. 6ರ ದರದಲ್ಲಿ ಯಾವುದೇ ಗರಿಷ್ಠ ಮಿತಿ ಇಲ್ಲದೆ 2024ರ ಡಿ. 1ರಿಂದ ಜಾರಿಗೆ ಬರುವಂತೆ ವಿಶೇಷ ಪ್ರಯಾಣ ಭತ್ತೆ ಮುಂಜೂರು ಮಾಡಿರುವುದಾಗಿ ಅಧಿ ಕಾರಿಗಳು ತಿಳಿಸಿದ್ದಾರೆ.

ಶೇ. 40 ಕನಿಷ್ಠ ಶಾಶ್ವತ ಅಂಗವೈಕಲ್ಯ ಹೊಂದಿರುವ ನೌಕರರು ಈ ಸೌಲಭ್ಯಕ್ಕೆ ಅರ್ಹರು.

 

Advertisement

Udayavani is now on Telegram. Click here to join our channel and stay updated with the latest news.

Next