Advertisement

ಪದವಿ ಪೂರ್ವ ಕಾಲೇಜಿನಲ್ಲಿ ಪುನಶ್ಚೇತನ ಕಾರ್ಯಕ್ರಮ

12:30 PM Oct 30, 2017 | |

ಔರಾದ: ಪ್ರತಿಯೊಂದು ವಿಷಯ ಕುರಿತು ಆಳ ಅಧ್ಯಯನ ಮಾಡಿ ಅದನ್ನು ಇನ್ನಿತರರಿಗೆ ತಿಳಿಸುವ ಮೂಲಕ ಪುನಶ್ಚೇತನಕ್ಕೆ ನಾವು ಮುಂದಾಗಬೇಕಾಗಿದೆ ಎಂದು ಸಮಾಜ ಸೇವಕ ಶಿವಕುಮಾರ ತರನ್ನಳ್ಳಿ ಹೇಳಿದರು. ಸಂತಪುರ ಸಿದ್ದರಾಮೇಶ್ವರ ಪದವಿಪೂರ್ವ ಮಹಾ ವಿದ್ಯಾಲಯದಲ್ಲಿ ನಡೆದ ಪುನಶ್ಚೇತನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತಾಡಿದರು. ಆಧುನಿಕ ಯುಗದಲ್ಲಿ ನಾವು ಪ್ರತಿಯೊಂದು ವಿಷಯದ ಬಗ್ಗೆ ನಿತ್ಯ ನಿರಂತರ ಅಧ್ಯಯನ ಮಾಡುತ್ತೇವೆ.

Advertisement

ಅಧ್ಯಯನ ಮಾಡಿದ ವಿಷಯ ಕುರಿತು ಯುವಕರಿಗೆ, ವಿದ್ಯಾರ್ಥಿಗಳಿಗೆ ತಿಳಿಸಿ ಪುನಶ್ಚೇತನ ಮಾಡಲು ಮುಂದಾಗಬೇಕು. ಅಂದಾಗ ಮಾತ್ರ ಅಧ್ಯಯನ ಮಾಡಿದ್ದಕ್ಕೂ ಸಾರ್ಥಕವಾಗುತ್ತದೆ ಎಂದರು. ವಿದ್ಯಾರ್ಥಿಗಳು ಹಾಗೂ ಯುವಕರು ತಾವು ವಿದ್ಯಾವಂತರು ಎನ್ನುವ ದರ್ಪ ತೋರಿಸದೇ ಗುರು-ಹಿರಿಯರು ಪಾಲಕರು ಮತ್ತು ಶಿಕ್ಷಕರಿಗೆ ಗೌರವ ನೀಡುವ ಸಂಪ್ರದಾಯ ರೂಢಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ತಾಲೂಕು ಜಾನಪದ ಸಾಹಿತ್ಯ ಪರಿಷತ್‌ ಅಧ್ಯಕ್ಷ ಸಂಜುಕುಮಾರ ಜುಮ್ಮಾ ಮಾತನಾಡಿ, ಭೂಮಿಯಲ್ಲಿ ಜನ್ಮ ತಾಳಿದ ಪ್ರತಿಯೊಬ್ಬರು ತಮ್ಮ ಕರ್ತವ್ಯಗಳನ್ನು ಕಡ್ಡಾಯವಾಗಿ ಪಾಲನೆ ಮಾಡಬೇಕು ಎಂದು ಸಲಹೆ ನೀಡಿದರು. ರಾಜ್ಯಮಟ್ಟದ ಸಂಪನ್ಮೂಲ ವ್ಯಕ್ತಿ ಬೀರಪ್ಪ ಕಡ್ಲಿಮಟ್ಟಿ ಮಾತನಾಡಿ, ಪ್ರತಿಯೊಬ್ಬರು ತಮ್ಮಲ್ಲಿ ಅದ್ಭುತವಾದ ಶಕ್ತಿ, ಸೃಜನಶೀಲತೆ ಇದೆ ಎಂದು ನಂಬಿ ಜೀವನ ಸಾಗಿಸಬೇಕು ಎಂದು ಹೇಳಿದರು.

ಪ್ರಾಚಾರ್ಯ ನವೀಲಕುಮಾರ ಮಾತನಾಡಿ, ಶಾಲೆ ಹಾಗೂ ಕಾಲೇಜಿನಲ್ಲಿ ಬೋಧನೆ ಮಾಡಿದ ವಿಷಯವನ್ನು ವಿದ್ಯಾರ್ಥಿಗಳು ಗಮನದಲ್ಲಿಟ್ಟುಕೊಂಡು ವಿದ್ಯಾರ್ಥಿ ಜೀವನವನ್ನು ಸುಂದರವಾಗಿ ನಿರ್ಮಿಸಿಕೊಳ್ಳಲು ಮುಂದಾಗಬೇಕು ಎಂದು ಸಲಹೆ ನೀಡಿದರು. ಗಣಪತಿ, ವಿಜಯಕುಮಾರ ಪಾಟೀಲ ಸೇರಿದಂತೆ ಇನ್ನಿತರರು ವೇದಿಕೆಯಲ್ಲಿದ್ದರು. 

Advertisement

Udayavani is now on Telegram. Click here to join our channel and stay updated with the latest news.

Next