Advertisement

ಗಿಳಿವಿಂಡು’ಪುನಶ್ಚೇತನ: ಶ್ರೀನಿವಾಸ ಪೂಜಾರಿ

12:51 AM Jun 23, 2019 | Sriram |

ಬದಿಯಡ್ಕ: ಮಂಜೇಶ್ವರಗೋವಿಂದ ಪೈ ಸ್ಮಾರಕ ಕೇಂದ್ರ ‘ಗಿಳಿವಿಂಡು’ ಇನ್ನಷ್ಟು ಅಭಿವೃದ್ಧಿಗೊಳ್ಳಬೇಕಿದ್ದು, ಕರ್ನಾಟಕ ಸರಕಾರದ ನೆರವಿನ ಮೂಲಕ ಬಾಕಿ ಉಳಿದಿರುವ ಕೆಲಸಗಳನ್ನು ಪೂರ್ತಿಗೊಳಿಸಲು ಪ್ರಯತ್ನಿಸುತ್ತೇನೆ ಎಂದು ಕರ್ನಾಟಕ ವಿಧಾನ ಪರಿಷತ್‌ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

Advertisement

ಕರ್ನಾಟಕ ಜಾನಪದ ಪರಿಷತ್‌ ಕೇರಳ ಗಡಿನಾಡ ಘಟಕ ಹಾಗೂ ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ ಸಂಯುಕ್ತಾಶ್ರಯದಲ್ಲಿ ಬದಿಯಡ್ಕದ ಗುರುಸದನದಲ್ಲಿ ಶನಿವಾರ ನಡೆದ ಮಕ್ಕಳ ಜಾನಪದ ಮೇಳ ಹಾಗೂ ಕೇಳು ಮಾಸ್ಟರ್‌ ಸ್ಮರಣಾರ್ಥ ಕನ್ನಡ ಶಾಲೆಗಳಿಗೆ ಪುಸ್ತಕ ವಿತರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಜಾನಪದ ಪರಿಷತ್‌ ಮತ್ತು ಅಕಾಡೆಮಿಯ ಕಾರ್ಯ ಶ್ಲಾಘನೀಯ ಎಂದು ಹೇಳಿದ ಅವರು, ಗಡಿನಾಡಿನಲ್ಲಿ ಕನ್ನಡದ ಪರವಾಗಿರುವ ಒಂದಷ್ಟುಮನಸ್ಸುಗಳಿಗೆ ಸ್ಫೂರ್ತಿ, ಪ್ರೋತ್ಸಾಹ ನೀಡಲು ಕರ್ನಾಟಕ ಸರಕಾರ ಸದಾ ಸಿದ್ಧವಿದೆ. ಕಾಲಕಾಲಕ್ಕೆ ಕಾಸರಗೋಡಿನ ಕನ್ನಡಿಗರ ಸ್ಥಿತಿಗತಿಗಳನ್ನು ಅರಿತು ಕರ್ನಾಟಕ ಸರಕಾರದ ಗಮನಕ್ಕೆ ತರುವ ಪ್ರಯತ್ನ ಮಾಡುತ್ತೇನೆ ಎಂದರು.

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಕರ್ನಾಟಕ ವಿಧಾನ ಪರಿಷತ್‌ ಉಪಸಭಾಪತಿ ಎಸ್‌.ಎಲ್. ಧರ್ಮೇಗೌಡ ಮಾತನಾಡಿ, ಕನ್ನಡದ ಸೇವೆಯಲ್ಲಿ ತೊಡಗಿರುವ ಗಡಿನಾಡಿನ ಕನ್ನಡಿಗರಿಗೆ ಹಕ್ಕುಗಳ ಕಸಿಯಲ್ಪಡುವ ಭಯ ಬೇಡ. ಕರ್ನಾಟಕ ಸರಕಾರ ಗಡಿನಾಡಿನ ಕನ್ನಡಿಗರ ಬೆನ್ನ ಹಿಂದೆ ಯಾವತ್ತೂ ಇದೆ ಎಂದು ಹೇಳಿದರು.

ಕನ್ನಡ ಪುಸ್ತಕ ಪ್ರಾಕಾರದ ಅಧ್ಯಕ್ಷೆ ಡಾ| ವಸುಂಧರಾ ಭೂಪತಿ ಅವರು ಕಾಸರಗೋಡಿನ ಕನ್ನಡ ಶಾಲೆಗಳಿಗೆ ಪುಸ್ತಕಗಳನ್ನು ಹಸ್ತಾಂತರಿಸಿ ಮಾತನಾಡಿ, ಅಜ್ಞಾನಿಯಾದ ಮಾನವನಿಗೆ ಬೆಳಕು ತೋರುವ ದಾರಿದೀವಿಗೆಯಾಗಲು ಪುಸ್ತಕಗಳಿಂದ ಸಾಧ್ಯ. ಜ್ಞಾನಾರ್ಜನೆಗಾಗಿ ನಿರಂತ ಓದು ಅಗತ್ಯ ಎಂದರು.

Advertisement

ಕ್ರೀಡಾ ಅಂಕಣಕಾರ ಜಗದೀಶ್ಚಂದ್ರ ಅಂಚನ್‌ ಸೂಟರ್‌ಪೇಟೆ ಅವರನ್ನು ಸಮ್ಮಾನಿಸಲಾಯಿತು. ಬದಿಯಡ್ಕ ಗ್ರಾ.ಪಂ. ಅಧ್ಯಕ್ಷ ಕೆ.ಎನ್‌. ಕೃಷ್ಣ ಭಟ್, ಕುಂಬಳೆ ಉಪಜಿಲ್ಲಾ ವಿದ್ಯಾಧಿಕಾರಿ ಯತೀಶ್‌ ಕುಮಾರ್‌ ರೈ, ದ.ಕ. ಕಸಾಪ ಅಧ್ಯಕ್ಷ ಪ್ರದೀಪ್‌ ಕುಮಾರ್‌ ಕಲ್ಕೂರ, ಕರ್ನಾಟಕ ಜಾನಪದ ಪರಿಷತ್ತಿನ ಗಡಿನಾಡ ಘಟಕ ಅಧ್ಯಕ್ಷ ಎ.ಆರ್‌. ಸುಬ್ಬಯ್ಯಕಟ್ಟೆ ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next