Advertisement

ಎಪಿಎಂಸಿ ತಿದ್ದುಪಡಿ ಕಾಯ್ದೆ ಹಿಂಪಡೆಯಿರಿ

04:52 AM May 21, 2020 | Suhan S |

ಕೊಪ್ಪಳ: ರಾಜ್ಯ ಸರ್ಕಾರ ಕೂಡಲೇ ಎಪಿಎಂಸಿ ತಿದ್ದುಪಡಿ ಕಾಯ್ದೆಯನ್ನು ವಾಪಸ್‌ ಪಡೆಯುವ ಮೂಲಕ ರೈತರ ಹಿತ ಕಾಯಬೇಕೆಂದು ಒತ್ತಾಯಿಸಿ ಭಾರತೀಯ ಕಮ್ಯೂನಿಸ್ಟ್‌ ಪಕ್ಷ (ಮಾರ್ಕ್ಸ್ವಾದ) ಜಿಲ್ಲಾ ಸಮಿತಿ ಮುಖಂಡರು ತಹಶೀಲ್ದಾರ್‌ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು. ಬಂಡವಾಳದಾರರು ಹಾಗೂ ಕಾರ್ಪೋರೇಟ್‌ ಕಂಪನಿಗಳಿಗೆ ಕಾರ್ಮಿಕ ಕಾಯ್ದೆಗಳಿಂದ ವಿನಾಯಿತಿ ನೀಡುವ ಮತ್ತು ಕಾರ್ಮಿಕರ ದುಡಿಮೆಯ ಸಮಯವನ್ನು ಹನ್ನೆರಡು ಗಂಟೆಗಳಿಗೆ ವಿಸ್ತರಿಸುವ ಕಾರ್ಮಿಕ ಕಾಯ್ದೆ ತಿದ್ದುಪಡಿಗೆ ಯಾವುದೇ ರೀತಿಯಲ್ಲಿ ಕ್ರಮ ವಹಿಸಬಾರದು.

Advertisement

ವಿದ್ಯುತ್‌ ರಂಗದ ಖಾಸಗೀಕರಣ ಬೇಡವೇ ಬೇಡ. ಗ್ರಾಮ ಪಂಚಾಯತ್‌ಗಳಿಗೆ ಆಡಳಿತ ಸಮಿತಿ ಸದಸ್ಯರನ್ನು ನೇಮಕ ಮಾಡುವುದನ್ನು ಕೂಡಲೇ ತಡೆಯಬೇಕು. ಹಾಲಿ ಇರುವ ಚುನಾಯಿತ ಸಮಿತಿಯನ್ನು ಮುಂದಿನ ಚುನಾವಣೆ ನಡೆಯುವರೆಗೆ ಉಸ್ತುವಾರಿಯಾಗಿ ಪರಿಗಣಿಸಬೇಕು. ಇಲ್ಲವೇ ಆಡಳಿತಾಧಿಕಾರಿಗಳನ್ನು ನೇಮಿಸಿ, ಚುನಾವಣೆ ನಡೆಸಲು ಅಗತ್ಯ ಪ್ರಕ್ರಿಯೆ ಹಾಗೂ ಸಿದ್ಧತೆಗಳನ್ನು ಕೋವಿಡ್‌-19 ಹಾಗೂ ಲಾಕ್‌ ಡೌನ್‌ ಪರಿಸ್ಥಿತಿಯ ಹಿನ್ನೆಲೆಯನ್ನು ಗಮನದಲ್ಲಿಟ್ಟುಕೊಂಡು ನಡೆಸಬೇಕು ಎಂದು ಒತ್ತಾಯಿಸಿದರು.

ಲಾಕ್‌ಡೌನ್‌ನಿಂದ ಸಂಕಷ್ಟಕ್ಕೊಳಗಾದ ಕುಟುಂಬಕ್ಕೆ ಪ್ರತಿ ತಿಂಗಳು 7,500 ರೂ. ನೆರವು ನೀಡಬೇಕು. ರೈತರ ಬೆಳೆನಷ್ಟ, ನಿರುದ್ಯೋಗ, ಆರ್ಥಿಕ ಸಂಕಷ್ಟದ ಕಾರಣದಿಂದ ರೈತರು, ಗೇಣಿದಾರರ, ಮಹಿಳೆಯರ ಸಾಲಗಳನ್ನು ಮೈಕ್ರೋ ಸಂಸ್ಥೆ ಸೇರಿದಂತೆ ಎಲ್ಲ ಸಾಲ ಮನ್ನಾ ಮಾಡಬೇಕು ಮತ್ತು ಬೆಳೆನಷ್ಟ ಪರಿಹಾರವನ್ನು ತಲಾ ಎಕರೆಗೆ ಕನಿಷ್ಠ 10,000 ರೂ. ನೀಡಬೇಕು. ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳ ಕಾರ್ಮಿಕರಿಗೆ ಲಾಕ್‌ಡೌನ್‌ ಅವಧಿಯ ಬಾಕಿ ಮೊತ್ತವನ್ನು ಸರಕಾರವೇ ಭರಿಸಬೇಕು. ಅವರೆಲ್ಲರಿಗೂ ಉದ್ಯೋಗದ ಭದ್ರತೆಯನ್ನು ಒದಗಿಸುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಮನವಿ ಸಲ್ಲಿಸಲಾಯಿತು. ಸಂಘಟನೆ ಮುಖಂಡರಾದ ಸುಂಕಪ್ಪ ಗದಗ, ಖಾಸಿಂ ಸರದಾರ ಸೇರಿ ಇತರರು ಇದ್ದರು.¬

Advertisement

Udayavani is now on Telegram. Click here to join our channel and stay updated with the latest news.

Next