ಬ್ರಹ್ಮಾವರ: ಸಹಕಾರಿ ವ್ಯವಸ್ಥೆಯಿಂದ ಗ್ರಾಮೀಣ ಭಾಗದ ಅಭಿವೃದ್ಧಿ, ಆರ್ಥಿಕ ಸ್ವಾವಲಂಬನೆ ಹಾಗೂ ಮಹಿಳಾ ಸಬಲೀಕರಣ ಸಾಧ್ಯವಾಗಿದೆ. ಸಹಕಾರಿ ಕ್ಷೇತ್ರದಿಂದ ಮಾತ್ರ ಸಮಾಜದಲ್ಲಿ ಕ್ರಾಂತಿಕಾರಿ ಬದಲಾವಣೆ ಸಾಧ್ಯ ಎಂದು ಎಸ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ| ಎಂ.ಎನ್. ರಾಜೇಂದ್ರ ಕುಮಾರ್ ಹೇಳಿದರು.
ಅವರು ರವಿವಾರ ಮಂದಾರ್ತಿ ಸೇವಾ ಸಹಕಾರಿ ಸಂಘದ ಶತಮಾನೋತ್ಸವ ಸಂಭ್ರಮ ಶತಸಾರ್ಥಕ್ಯವನ್ನು ಉದ್ಘಾಟಿಸಿ ಮಾತನಾಡಿದರು. ಶೂನ್ಯ ಹಾಗೂ ಕಡಿಮೆ ಬಡ್ಡಿ ಸಾಲ, ಪಡಿತರ ಸಹಿತ ಸರಕಾರದ ಯೋಜನೆಗಳನ್ನು ತಲುಪಿಸಲು ಸಹಕಾರಿ ವ್ಯವಸ್ಥೆ ಅಗತ್ಯವಾಗಿದೆ ಎಂದರು.
ಸಂಸದ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ, ಇಂದು ರಾಷ್ಟ್ರೀಕೃತ ಬ್ಯಾಂಕ್‌ಗಳ ಸ್ಥಾನವನ್ನು ಸಹಕಾರಿ ಸಂಘಗಳು ಆವರಿಸುತ್ತಿದೆ. ಸಹಕಾರಿ ಕ್ಷೇತ್ರ ಗಟ್ಟಿಯಾಗಿ ಬೆಳೆಯುವ ಜತೆಗೆ ಜನಸಾಮಾನ್ಯರ ಬದುಕಿಗೂ ಶಕ್ತಿ ತುಂಬುವಂತಾಗಲಿ ಎಂದರು.
ಹಿರಿಯರ ನಿಸ್ವಾರ್ಥ ಸೇವೆ, ಬದ್ಧತೆ, ಪರಿಶ್ರಮದಿಂದ ಕ್ಷೇತ್ರವು ಬೆಳೆದು ಬಂದಿದೆ ಎಂದರು.
ಸಂಘದ ಅಧ್ಯಕ್ಷ ಎಚ್. ಗಂಗಾಧರ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಅತಿಥಿಗಳಾಗಿ ಮಂದಾರ್ತಿ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ಆನುವಂಶಿಕ ಆಡಳಿತ ಮೊಕ್ತೇಸರ ಎಚ್. ಧನಂಜಯ ಶೆಟ್ಟಿ, ಶಾಸಕ ಕಿರಣ್ ಕುಮಾರ್ ಕೊಡ್ಗಿ, ಬೆಂಗಳೂರು ವಿ.ವಿ. ಕುಲಪತಿ ಡಾ| ಜಯಕರ ಶೆಟ್ಟಿ ಎಂ., ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ, ಎಸ್‌ಸಿಡಿಸಿಸಿ ಬ್ಯಾಂಕ್ ನಿರ್ದೇಶಕರಾದ ಡಾ| ದೇವಿಪ್ರಸಾದ್ ಶೆಟ್ಟಿ ಬೆಳಪು, ಅಶೋಕ್ ಕುಮಾರ್ ಶೆಟ್ಟಿ ಬೆಳ್ಳಂಪಳ್ಳಿ, ರಾಜೇಶ್ ರಾವ್, ಹೆಗ್ಗುಂಜೆ ಗ್ರಾ.ಪಂ. ಅಧ್ಯಕ್ಷ ರಾಮಕೃಷ್ಣ, ಕಾಡೂರಿನ ಜಲಂಧರ ಶೆಟ್ಟಿ, ಬಿಲ್ಲಾಡಿಯ ಶಾರದಾ, ಸಂಘದ ಉಪಾಧ್ಯಕ್ಷ ಶಂಭುಶಂಕರ ರಾವ್, ನಿರ್ದೇಶಕರಾದ ನಿತ್ಯಾನಂದ ಶೆಟ್ಟಿ, ಚಂದ್ರಶೇಖರ ಶೆಟ್ಟಿ, ಸಂತೋಷ್ ಕುಮಾರ್ ಶೆಟ್ಟಿ, ಅರುಣ್ ಕುಮಾರ್ ಶೆಟ್ಟಿ, ಬಸವ ಮರಾಠಿ, ಪ್ರವೀಣ್ ಕುಮಾರ್ ಶೆಟ್ಟಿ, ಬೇಬಿ ಪೂಜಾರಿ, ಪ್ರೇಮಾ, ರಾಧಾ, ಕೆ. ರಾಜಾರಾಮ ಶೆಟ್ಟಿ, ಸಿಇಒ ರಾಮಕೃಷ್ಣ ಶೆಟ್ಟಿ ಸಹಿತ ಪ್ರಮುಖರು ಉಪಸ್ಥಿತರಿದ್ದರು.
ಶತಮಾನೋತ್ಸವ ಸಂಭ್ರಮದ ಸ್ಮರಣ ಸಂಚಿಕೆ ಬಿಡುಗಡೆ, ನವೋದಯ ಸಂಘಗಳ ಉದ್ಘಾಟನೆ ಜರಗಿತು. ಅತಿಥಿಗಳನ್ನು, ಸಂಘದ ಅಧ್ಯಕ್ಷರು, ಮಾಜಿ ನಿರ್ದೇಶಕರು ಹಾಗೂ ಕಾರ್ಯನಿರ್ವಹಣಾಧಿಕಾರಿ ಅವರನ್ನು ಸಮ್ಮಾನಿಸಲಾಯಿತು. ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮ ಜರಗಿತು.
ನಿರ್ದೇಶಕರಾದ ಶೇಡಿಕೊಡ್ಲು ವಿಠಲ್ ಶೆಟ್ಟಿ ಸ್ವಾಗತಿಸಿ, ಗುರುಪ್ರಸಾದ್ ವಂದಿಸಿದರು. ಅಧ್ಯಾಪಕರಾದ ಪ್ರಶಾಂತ್ ಶೆಟ್ಟಿ ಹಾವಂಜೆ, ಶಶಿಧರ ಶೆಟ್ಟಿ ನಂಚಾರು ಕಾರ್ಯಕ್ರಮ ನಿರೂಪಿಸಿದರು.