Advertisement

Reward: ಕಡೂರಿನ ಡಾ| ಕೃಷ್ಣಮೂರ್ತಿಗೆ ರಾಷ್ಟ್ರೀಯ ವಿಜ್ಞಾನ ಪುರಸ್ಕಾರ

12:27 AM Aug 24, 2024 | Team Udayavani |

ಬೆಂಗಳೂರು: ಭಾರತೀಯ ಕೃಷಿ ವಿಜ್ಞಾನ ಸಂಸ್ಥೆಯಲ್ಲಿ ಹಿರಿಯ ವಿಜ್ಞಾನಿಯಾಗಿ ಕಾರ್ಯನಿರ್ವಹಿಸುತ್ತಿರುವ ಕಡೂರು ತಾಲೂಕಿನ ಸರಸ್ವತಿಪುರ ಗ್ರಾಮದ ಡಾ. ಎಸ್‌.ಎಲ್‌. ಕೃಷ್ಣಮೂರ್ತಿ ಅವರು ರಾಷ್ಟ್ರೀಯ ವಿಜ್ಞಾನ ಪುರಸ್ಕಾರಕ್ಕೆ ಭಾಜನರಾಗಿದ್ದಾರೆ.

Advertisement

ಗುರುವಾರ ದಿಲ್ಲಿಯ ರಾಷ್ಟ್ರಪತಿ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೃಷಿ ವಿಜ್ಞಾನ ಕ್ಷೇತ್ರದ ಸಾಧನೆಗಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಕೃಷ್ಣಮೂರ್ತಿ ಅವರಿಗೆ ರಾಷ್ಟ್ರೀಯ ವಿಜ್ಞಾನ ಪುರಸ್ಕಾರ ಪ್ರದಾನ ಮಾಡಿದರು.

ಡಾ| ಕೃಷ್ಣಮೂರ್ತಿ ಅವರು 16 ಭತ್ತದ ತಳಿಗಳನ್ನು ಅಭಿವೃದ್ಧಿಪಡಿಸಿದ್ದಾರೆ. ಈ ಪ್ರಭೇದಗಳನ್ನು ಭಾರತದಲ್ಲಿ 2 ಮಿಲಿಯನ್‌ ಹೆಕ್ಟೇರ್‌ ಭೂಮಿಯಲ್ಲಿ ಬೆಳೆಸಲಾಗುತ್ತಿದೆ. ಈ ಭತ್ತದ ತಳಿಗಳು ರೈತರಿಗೆ ತಮ್ಮ ಆದಾಯವನ್ನು ಹೆಚ್ಚಿಸಲು ಸಹಾಯವಾಗಿದೆ. ಆ ಹಿನ್ನೆಲೆಯಲ್ಲಿ ರಾಷ್ಟ್ರಪತಿಗಳು ರಾಷ್ಟ್ರೀಯ ವಿಜ್ಞಾನ ಪುರಸ್ಕಾರ ಯುವ ವಿಜ್ಞಾನ – ಶಾಂತಿ ಸ್ವರೂಪ್‌ ಭಟ್ನಾಗರ್‌ ಪ್ರಶಸ್ತಿಯನ್ನು ಕೃಷಿ ವಿಜ್ಞಾನ ಕ್ಷೇತ್ರದಲ್ಲಿನ ಸಾಧನೆಗಾಗಿ ಪ್ರದಾನ ಮಾಡಿದ್ದಾರೆ. ಕೃಷಿ ಕ್ಷೇತ್ರದ ಸಾಧನೆಗಾಗಿ ಕೃಷ್ಣಮೂರ್ತಿ ಅವರು 2020ರಲ್ಲಿ ಜಪಾನ್‌ ಸರಕಾರ ನೀಡುವ ಜಪಾನ್‌ ಯುವ ವಿಜ್ಞಾನಿ ಪ್ರಶಸ್ತಿ ಮುಡಿಗೇರಿಸಿಕೊಂಡಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next