ಎನ್ನುವ ಆತಂಕದಲ್ಲಿಯೇ ಬಹುತೇಕ ರೈತರು ಭತ್ತ ಕಟಾವು ಮಾಡಿದ ನಂತರ ವ್ಯಾಪಾರಿಗಳು ಕೇಳುವ ದರಕ್ಕೆ ಭತ್ತವನ್ನು ಮಾರಾಟ ಮಾಡಬೇಕಾದ ಪರಿಸ್ಥಿತಿ ಇದೆ.
Advertisement
ರೈತರ ಈ ಅನಿವಾರ್ಯತೆಯನ್ನು ಬಳಸಿಕೊಂಡು ಕೆಲವು ರೈಸ್‌ಮಿಲ್‌ಗಳು ಮತ್ತು ವ್ಯಾಪಾರಿಗಳು ಸರ್ಕಾರ ನಿಗಮಾಡಿದ ದರಕ್ಕಿಂತ ಕಡಿಮೆ ದರದಲ್ಲಿ ಭತ್ತವನ್ನು ಖರೀದಿಸುವುದರಿಂದ ರೈತರಿಗೆ ನಷ್ಟ ಉಂಟಾಗುತ್ತಿದೆ. ಆದ್ದರಿಂದ ಕಟಾವಿನ ಆರಂಭದ ಹಂತದಲ್ಲಿ ಅಂದರೆ ಅಕ್ಟೋಬರ್ ತಿಂಗಳಲ್ಲಿಯೇ ಬೆಂಬಲ ಬೆಲೆಯಲ್ಲಿ ಭತ್ತ ಖರೀದಿಸುವ ಕೇಂದ್ರಗಳನ್ನು ತೆರೆದರೆ ರೈತರಿಗೆ ಸಾಕಷ್ಟು ಅನುಕೂಲವಾಗಲಿವೆ.
ಸರ್ಕಾರಕ್ಕೆ ಖರೀದಿ ಕೇಂದ್ರ ತೆರೆಯವ ವ್ಯವಸ್ಥೆ ಮಾಡುವಂತೆ ರೈತರು ಮನವಿ ಸಲ್ಲಿಸುವ ಬದಲು ರೈತರ ಎಲ್ಲ ಬೆಳೆಗಳನ್ನು ಬೆಂಬಲ ಬೆಲೆಯಲ್ಲಿ ಖರೀದಿಸುವಂತೆ ಖರೀದಿ ಕೇಂದ್ರಗಳು ಯಾವತ್ತು ತೆರೆದಿರಬೇಕು ಎನ್ನುವ ಬೇಡಿಕೆ ರೈತರದ್ದಾಗಿದೆ. ಆದರೆ ಸರ್ಕಾರ ರೈತರ ಈ ಬೇಡಿಕೆಗೆ ಸ್ಪಂದಿಸುತ್ತಿಲ್ಲ.
Related Articles
Advertisement
ಈ ವರ್ಷ ಮುಂಗಾರು ಹಂಗಾಮಿನಲ್ಲಿ ಆರ್‌ಎನ್‌ಆರ್ ಭತ್ತ ರೂ. 2200ಕ್ಕೆ, ಸೋನಾಮಸೂರಿ ರೂ. 2000ಕ್ಕೆ ಮಾರಾಟವಾಗುತ್ತಿತ್ತು. ಆದರೆ ತಾಲೂಕಿನಲ್ಲಿ ಭತ್ತ ಕೊಯ್ಲು ಜೋರಾಗುತ್ತಿದ್ದಂತೆ ಮಾರುಕಟ್ಟೆಯಲ್ಲಿ ಮಾರಾಟ ಮಾಡುವ ರೈತರಿಗೆ ಸದ್ಯ ಆರ್‌ಎನ್‌ಆರ್ ಭತ್ತದ ಬೆಲೆಯು ರೂ. 1900, ಸೋನಾಮಸೂರಿ ರೂ. 1800 ಬೆಲೆ ಸಿಗುತ್ತಿದೆ. ಭತ್ತ ಕೊಯ್ಲು ಆರಂಭವಾದ ಒಂದೇ ವಾರದಲ್ಲಿ ಆರ್ ಎನ್‌ಆರ್ ಭತ್ತ ಪ್ರತಿ ಕ್ವಿಂಟಲ್‌ಗೆ ರೂ. 200, ಸೋನಾಮಸೂರಿ ಭತ್ತ ಪ್ರತಿ ಕ್ವಿಂಟಲ್‌ಗೆ ರೂ. 200 ಬೆಲೆ ಕಡಿಮೆಯಾಗಿದೆ. ಇದು ರೈತರ ಆತಂಕಕ್ಕೆ ಕಾರಣವಾಗಿದೆ.
ರೈತರು ಬೆಳೆಯುವ ಪ್ರತಿ ಬೆಳೆಯನ್ನು ಖರೀದಿಸಲು ಸರ್ಕಾರ ಖರೀದಿ ಕೇಂದ್ರಗಳನ್ನು ವರ್ಷದ 365 ದಿನ ತೆರೆದರೆ ಮಾರುಕಟ್ಟೆಯಲ್ಲಿ ರೈತರ ಬೆಳೆಗಳಿಗೆ ಉತ್ತಮ ಬೆಲೆ ದೊರೆಯಲಿದೆ. ಸರ್ಕಾರ ಸಿರುಗುಪ್ಪ ತಾಲೂಕಿನಲ್ಲಿ ನಾಲ್ಕು ಖರೀದಿ ಕೇಂದ್ರಗಳನ್ನು ತೆರೆಯಲು ಕ್ರಮ ಕೈಗೊಳ್ಳಬೇಕು.
ಆರ್.ಮಾದವರೆಡ್ಡಿ, ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ರಾಜ್ಯಾಧ್ಯಕ್ಷ
ಸದ್ಯ ಮಾರುಕಟ್ಟೆಯಲ್ಲಿ ನಮ್ಮ ಭತ್ತವನ್ನು ಮಾರಾಟ ಮಾಡಿದರೆ ಒಂದು ಕ್ವಿಂಟಲ್‌ಗೆ ರೂ.200ರಿಂದ 300ವರೆಗೆ ಕಡಿಮೆ ಬೆಲೆ ಸಿಗುತ್ತಿದೆ. ಕೇಂದ್ರ ಸರ್ಕಾರ ಭತ್ತ ಸೇರಿದಂತೆ ಇತರೆ ಬೆಳೆಗಳಿಗೆ ದರವನ್ನು ನಿಗ ಪಡಿಸಿದೆ. ಆದರೆ ಮಾರುಕಟ್ಟೆಯಲ್ಲಿ ಕೇಂದ್ರ ಸರ್ಕಾರ ನಿಗ ಪಡಿಸಿದ ಬೆಲೆಗಿಂತ ಕಡಿಮೆ ಬೆಲೆಗೆ ವ್ಯಾಪಾರಿಗಳು ಖರೀದಿಸುತ್ತಿದ್ದಾರೆ. ಸರ್ಕಾರ ನಿಗ ಪಡಿಸಿದ ಬೆಲೆಗಿಂತ ಕಡಿಮೆ ಬೆಲೆಗೆ ಖರೀದಿಸುವ ವ್ಯಾಪಾರಿಗಳಿಗೆ ಶಿಕ್ಷೆನೀಡುವ ಕಾನೂನನ್ನು ಸರ್ಕಾರ ಜಾರಿಗೆ ತಂದರೆ ರೈತರಿಗೆ ಅನುಕೂಲವಾಗಲಿದೆ.ಯಲ್ಲಪ್ಪ, ಸುಂಕಪ್ಪ, ಈರಪ್ಪ, ರಾರಾವಿ ಗ್ರಾಮದ ರೈತ ಆರ್. ಬಸವರೆಡ್ಡಿ ಕರೂರು