Advertisement

Road Mishap; ರಿಕ್ಷಾ – ದ್ವಿಚಕ್ರ ವಾಹನ ಅಪಘಾತ; ಸವಾರನಿಗೆ ಗಂಭೀರ ಗಾಯ

09:40 PM Oct 21, 2023 | Team Udayavani |

ನರಿಮೊಗರು: ಗ್ರಾಮದ ಗಡಿಪಿಲ ಎಂಬಲ್ಲಿ ರಿಕ್ಷಾ – ದ್ವಿಚಕ್ರ ವಾಹನ ನಡುವೆ ಅಪಘಾತ ಸಂಭವಿಸಿ ದ್ವಿಚಕ್ರ ವಾಹನ ಸವಾರ ಗಂಭೀರ ಗಾಯಗೊಂಡ ಬಗ್ಗೆ ವರದಿಯಾಗಿದೆ.

Advertisement

ಸಿರಾಜ್‌ ಎಂಬವರು ಚಲಾಯಿಸುತ್ತಿದ್ದ ರಿಕ್ಷಾ ಹಾಗೂ ಸನಿ¾ತ್‌ ಟಿ. ಚಲಾಯಿಸುತ್ತಿದ್ದ ದ್ವಿಚಕ್ರ ವಾಹನಕ್ಕೆ ಡಿಕ್ಕಿಯಾಗಿದೆ. ಪರಿಣಾಮ ಸ್ಕೂಟರ್‌ ಸವಾರ ಸವಣೂರು ಸಮೀಪದ ತೆಕ್ಕಿತಡಿ ನಿವಾಸಿ ಸನಿ¾ತ್‌ ಟಿ. ಗಂಭೀರ ಗಾಯಗೊಂಡಿದ್ದಾರೆ.

ಗಾಯಾಳುವನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪುತ್ತೂರು ಸಂಚಾರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next