Advertisement

ಶೀಘ್ರದಲ್ಲೇ ಎಚ್‌ಡಿಕೆಗೆ ತಕ್ಕ ಉತ್ತರ: ಡಿಕೆಶಿ

08:41 PM Aug 06, 2023 | Team Udayavani |

ಬೆಂಗಳೂರು: ತಮ್ಮ ವಿರುದ್ಧ ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಮಾಡುತ್ತಿರುವ ವರ್ಗಾವಣೆ ದಂಧೆ ಆರೋಪವು ಪ್ರಧಾನಿವರೆಗೂ ಹೋಗಿದೆ ಎಂದು ಹೇಳಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌, “ಅದಕ್ಕೆ ತಕ್ಕಂತೆ ಶೀಘ್ರದಲ್ಲೇ ಉತ್ತರ ನೀಡುತ್ತೇನೆ” ಎಂದು ತಿರುಗೇಟು ನೀಡಿದ್ದಾರೆ.

Advertisement

“ಕುಮಾರಸ್ವಾಮಿ ಅವರ ಆರೋಪಕ್ಕೆ ಬರೀ ಮಾಧ್ಯಮಗಳ ಮುಂದೆ ಉತ್ತರ ನೀಡಿದರೆ ಸಾಲದು, ಪ್ರಧಾನಮಂತ್ರಿವರೆಗೂ ಇದು ತಲುಪಿದೆ. ಇದಕ್ಕೆ ತಕ್ಕಂತೆ ಉತ್ತರ ನೀಡುತ್ತೇನೆ. ಕಾದುನೋಡಿ’ ಎಂದು ಹೇಳಿದ್ದಾರೆ. ಇದರೊಂದಿಗೆ ಇಬ್ಬರ ನಡುವಿನ ತಿಕ್ಕಾಟ ತಾರಕಕ್ಕೇರಿದ್ದು, ಮುಂಬರುವ ದಿನಗಳಲ್ಲಿ ಮತ್ತಷ್ಟು ತೀವ್ರ ಸ್ವರೂಪ ಪಡೆದುಕೊಳ್ಳುವ ಸ್ಪಷ್ಟ ಸೂಚನೆಗಳಿವೆ.

ಕುಮಾರಸ್ವಾಮಿ ಅವರ ಆರೋಪಕ್ಕೆ ಭಾನುವಾರ ಸದಾಶಿವನಗರದ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ.ಶಿವಕುಮರ್‌, “ಸಮಯ ಬಂದಾಗ ಇದಕ್ಕೆ ತಕ್ಕ ಉತ್ತರ ನೀಡುತ್ತೇನೆ. ನನಗೂ ಅವರ ಬಗ್ಗೆ ಗೊತ್ತಿದೆ. ಕುಮಾರಸ್ವಾಮಿ ಮತ್ತು ಅವರ ತಂದೆ ವಿರುದ್ಧ ನಾನು ಸ್ಪರ್ಧಿಸಿದ್ದೇನೆ. ಅವರ ಪತ್ನಿ ವಿರುದ್ಧ ನನ್ನ ಸಹೋದರ ಸ್ಪರ್ಧಿಸಿದ್ದಾರೆ. ಕಾದುನೋಡಿ, ಈಗ ನಾನು ಈ ಬಗ್ಗೆ ಹೆಚ್ಚು ಚರ್ಚೆ ಮಾಡುವುದಿಲ್ಲ” ಎಂದು ತಿಳಿಸಿದರು.

ಅಷ್ಟಕ್ಕೂ ಅವರ ಆರೋಪಕ್ಕೆ ಮಾಧ್ಯಮಗಳ ಮುಂದೆ ಉತ್ತರ ನೀಡಿದರೆ ಸಾಲದು, ಅವರು ಪ್ರಧಾನಮಂತ್ರಿವರೆಗೂ ಹೋಗಿದ್ದಾರೆ. ಅದಕ್ಕೆ ತಕ್ಕಂತೆ ಉತ್ತರ ನೀಡುತ್ತೇನೆ ಎಂದೂ ತಿರುಗೇಟು ನೀಡಿದರು.

Advertisement

Udayavani is now on Telegram. Click here to join our channel and stay updated with the latest news.

Next