Advertisement

ಅಕ್ರಮ ಸಕ್ರಮ ರೈತರಿಗೆ ನ್ಯಾಯ: ರಮಾನಾಥ ರೈ

06:05 AM Feb 08, 2018 | Team Udayavani |

ವಿಧಾನ ಪರಿಷತ್‌: ಡೀಮ್ಡ್ ಅರಣ್ಯ ಪರದೇಶದಲ್ಲಿ ಅಕ್ರಮವಾಗಿ ಸಾಗುವಳಿ ಮಾಡಿಕೊಂಡಿರುವ ರೈತರಿಗೆ ಸರ್ಕಾರ ನ್ಯಾಯ ಒದಗಿಸಲಿದೆ ಎಂದು ಅರಣ್ಯ ಸಚಿವ ರಮಾನಾಥ ರೈ ಹೇಳಿದ್ದಾರೆ.

Advertisement

ಬಿಜೆಪಿ ಸದಸ್ಯ ಕೋಟಾ ಶ್ರೀನಿವಾಸ ಪೂಜಾರಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, 1997 ರಲ್ಲಿ ರಾಜ್ಯದಲ್ಲಿ 10 ಲಕ್ಷ ಎಕರೆ ಡೀಮ್ಡ್ ಅರಣ್ಯ ಪ್ರದೇಶ ಎಂದು ಗುರುತಿಸಲಾಗಿತ್ತು. ನಂತರ ಕುಮ್ಕಿ, ಕಾನ್‌ ಬಾನೆ ಪ್ರದೇಶಗಳನ್ನು ಹೊರತು ಪಡಿಸಿ 3 ಲಕ್ಷ 30 ಸಾವಿರ ಎಕರೆ ಪ್ರದೇಶ ಎಂದು ಅಂತಿಮಗೊಳಿಸಲಾಗಿದೆ ಎಂದರು.

ಆದರೆ, ಅವರ ಲಿಖೀತ ಉತ್ತರದಲ್ಲಿ ಸಂಪುಟದ ನಿರ್ಣಯದಂತೆ ಡೀಮ್ಡ್ ಫಾರೆಸ್ಟ್‌ನಿಂದ ಕೈ ಬಿಡಬಹುದಾದ ಭೂಮಿಯನ್ನು ಯಾವುದೇ ಖಾಸಗಿ ವ್ಯಕ್ತಿಗೆ ನೀಡದೇ ಸಾರ್ವಜನಿಕ ಯೋಜನೆಗಳಿಗೆ ಉಪಯೋಗಿಸಿಕೊಳ್ಳಲಾಗುವುದು ಎಂದು ತಿಳಿಸಿದ್ದರು.

ಅದನ್ನು ಪ್ರಶ್ನಿಸಿದ ಪ್ರತಿಪಕ್ಷದ ನಾಯಕ ಕೆ.ಎಸ್‌. ಈಶ್ವರಪ್ಪ, ಸರ್ಕಾರ ಸಾರ್ವಜನಿಕ ಉದ್ದೇಶಗಳಿಗೆ ಬಳಸಿಕೊಳ್ಳುತ್ತದೆ ಎಂದರೆ, ಸಾಗುವಳಿ ಮಾಡಿಕೊಂಡು 94ಸಿ, 94ಸಿಸಿ ಯಲ್ಲಿ ಅರ್ಜಿ ಹಾಕಿದ ಬಡ ರೈತರಿಗೆ ಅನ್ಯಾಯ ಮಾಡಿದಂತಾಗುತ್ತದೆ. ಸರ್ಕಾರ ಅವರಿಗೆ ಜಮೀನು ನೀಡುವುದಿಲ್ಲವೇ ಎಂದು ಪ್ರಶ್ನಿಸಿದರು. ಆಗ ರಮಾನಾಥ ರೈ, ಡೀಮ್ಡ್ ಫಾರೆಸ್ಟ್‌ನಲ್ಲಿ ಸಾಗುವಳಿ ಮಾಡಿಕೊಂಡಿರುವ ರೈತರಿಗೆ ಯಾವುದೇ ತೊಂದರೆ ಕೊಡುವುದಿಲ್ಲ. ಈ ಬಗ್ಗೆ ಇನ್ನೂ ಅಂತಿಮ ತೀರ್ಮಾನವಾಗಿಲ್ಲ. ಸಂಪುಟದಲ್ಲಿ ಚರ್ಚಿಸಿ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next