Advertisement

‘ಹಕ್ಕು, ಕರ್ತವ್ಯದಿಂದ ಬದುಕು ಸುಂದರ’

03:48 PM Nov 25, 2017 | Team Udayavani |

ಪುತ್ತೂರು: ಜೀವನದಲ್ಲಿ ಹಕ್ಕುಗಳು ಮತ್ತು ಕರ್ತವ್ಯಗಳಿಗೆ ಸಮಾನ ಸ್ಥಾನಮಾನ ಕಲ್ಪಿಸಿದಾಗ ಬದುಕು ಸುಂದರವಾಗಿ ರೂಪುಗೊಳ್ಳುತ್ತದೆ ಎಂದು ಸಂತ ಫಿಲೋಮಿನಾ ಕಾಲೇಜಿನ ಸ್ನಾತಕೋತ್ತರ ಅಧ್ಯಯನ ಕೇಂದ್ರದ ಮುಖ್ಯಸ್ಥ ವಂ| ಡಾ| ಆ್ಯಂಟನಿ ಪ್ರಕಾಶ್‌ ಮೊಂತೇರೊ ಹೇಳಿದರು.

Advertisement

ಕಾಲೇಜಿನ ಸ್ನಾತಕೋತ್ತರ ಅಧ್ಯಯನ ಕೇಂದ್ರದ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯ ಧನಸಹಾಯ ಆಯೋಗದ ಪ್ರಾಯೋಜಕತ್ವದಲ್ಲಿ ‘ಮಾನವ ಹಕ್ಕುಗಳು ಮತ್ತು ಕರ್ತವ್ಯಗಳ ಶಿಕ್ಷಣ’ ಕುರಿತು ಆಯೋಜಿಸಲಾದ ಸರ್ಟಿಫಿಕೇಟ್‌ ಕೋರ್ಸ್‌ನ ಸಮಾರೋಪದಲ್ಲಿ ಮಾತನಾಡಿದರು. ಸಂವಿಧಾನದಲ್ಲಿ ಹಕ್ಕುಗಳಿಗೆ ಕೊಟ್ಟಷ್ಟೇ ಪ್ರಾಮುಖ್ಯತೆಯನ್ನು ಕರ್ತವ್ಯಗಳಿಗೂ ನೀಡಲಾಗಿದೆ. ಇಂದಿನ ಈ ಸ್ಪರ್ಧಾತ್ಮಕ ಯುಗದಲ್ಲಿ ಯಶಸನ್ನು ಸಾಧಿಸುವಲ್ಲಿ ಪ್ರಯತ್ನಿಸಬೇಕು ಎಂದರು.

ಪ್ರಾಯೋಗಿಕ ಜ್ಞಾನ ಲಭ್ಯ
ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಚಾರ್ಯ ಪ್ರೊ| ಲಿಯೊ ನೊರೊನ್ಹಾ ಮಾತನಾಡಿ, ವಿದ್ಯಾರ್ಥಿಗಳ ಸರ್ವಾಂಗೀಣ ವಿಕಸನಕ್ಕೆ ಸರ್ಟಿಫಿಕೇಟ್‌ ಕೋರ್ಸ್‌ ಪ್ರಮುಖ ಪಾತ್ರ ವಹಿಸುತ್ತವೆ. ಮಾನವ ಹಕ್ಕುಗಳು ಮತ್ತು ಕರ್ತವ್ಯಗಳ ಕುರಿತು ಸರ್ಟಿಫಿಕೇಟ್‌ ಕೋರ್ಸ್‌ನಲ್ಲಿ ಭಾಗವಹಿಸುವ ಮೂಲಕ ವಿದ್ಯಾರ್ಥಿಗಳು ತಮ್ಮ ಬದುಕಿಗೆ ಅಗತ್ಯವಿರುವ ಸೈದ್ಧಾಂತಿಕ ಮತ್ತು ಪ್ರಾಯೋಗಿಕ ಜ್ಞಾನ ಸಂಪಾದಿಸಲು ಅವಕಾಶವಿದೆ ಎಂದರು.

ಯೋಗಿತಾ ಮತ್ತು ತಂಡ ಪ್ರಾರ್ಥಿಸಿದರು. ಸರ್ಟಿಫಿಕೇಟ್‌ ಕೋರ್ಸ್‌ನ ಸಂಯೋಜಕ ವಂ| ಸುನಿಲ್‌ ಜಾರ್ಜ್‌ ಡಿ’ಸೋಜಾ ಸ್ವಾಗತಿಸಿ, ಪ್ರದೀಪ್‌ ಕೆ.ಎಸ್‌. ವಂದಿಸಿದರು. ಸರ್ಟಿಫಿಕೇಟ್‌ ಕೋರ್ಸ್‌ನಲ್ಲಿ ಪಾಲ್ಗೊಂಡ ವಿದ್ಯಾರ್ಥಿ ಲಕ್ಷ್ಮಣ್‌ ಅನಿಸಿಕೆ ವ್ಯಕ್ತಪಡಿಸಿದರು. ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ರಕ್ಷಾ ಕಾರ್ಯಕ್ರಮ ನಿರೂಪಿಸಿದರು. ಸರ್ಟಿಫಿಕೇಟ್‌ ಕೋರ್ಸ್‌ ಪೂರ್ತಿಗೊಳಿಸಿದ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ವಿತರಿಸಲಾಯಿತು.

Advertisement

Udayavani is now on Telegram. Click here to join our channel and stay updated with the latest news.

Next