Advertisement

ರಿಂಗ್‌ರೋಡ್‌ ಕಾಮಗಾರಿ ವೀಕ್ಷಣೆ

07:56 AM May 16, 2020 | Suhan S |

ಶಿವಮೊಗ್ಗ: ನಗರ ರೈಲ್ವೆ ಕಾಂಪೌಂಡ್‌ನಿಂದ ಹೊಸಪೇಟೆ-ಶಿವಮೊಗ್ಗ ರಸ್ತೆ ಸಂಪರ್ಕಿಸುವ 100ಅಡಿ ವರ್ತುಲ ರಸ್ತೆ ಕಾಮಗಾರಿ ಸ್ಥಳವನ್ನು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್‌.ಈಶ್ವರಪ್ಪ ಹಾಗೂ ಸಂಸದ ಬಿ.ವೈ.ರಾಘವೇಂದ್ರ ಅವರು ಶುಕ್ರವಾರ ಪರಿಶೀಲಿಸಿದರು.

Advertisement

ಸದರಿ ರಸ್ತೆಯ ಎರಡು ಬದಿಯಲ್ಲಿ 750ಮೀಟರ್‌ ಉದ್ದಕ್ಕೆ ಸಿಮೆಂಟ್‌ ಕಾಂಕ್ರಿಟ್‌ ಚತುಷ್ಪಥ ರಸ್ತೆ, ರಸ್ತೆಯ ಎರಡೂ ಬದಿಗಳಲ್ಲಿ ಬಾಕ್ಸ್‌ ಚರಂಡಿ ನಿರ್ಮಾಣ, ರೈಲ್ವೆ ನಿಲ್ದಾಣಕ್ಕೆ ಸಂಪರ್ಕಿಸುವ 100ಮೀಟರ್‌ ಸಿಸಿ ರಸ್ತೆ ನಿರ್ಮಾಣ ಮತ್ತು ರೈಲ್ವೆ ನಿಲ್ದಾಣದಿಂದ ಹೊರಗೆ ಹೋಗಲು 400ಮೀಟರ್‌ ಡಾಂಬರ್‌ ರಸ್ತೆ ನಿರ್ಮಾಣ ಕಾಮಗಾರಿ ಇದರಲ್ಲಿ ಸೇರಿದೆ.

ರಸ್ತೆ ನಿರ್ಮಾಣಕ್ಕೆ ಅಡ್ಡಲಾಗಿರುವ ವಸತಿಗೃಹಗಳ ಭೂಸ್ವಾಧೀನಕ್ಕಾಗಿ ರೈಲ್ವೆ ಇಲಾಖೆಗೆ ಈಗಾಗಲೇ 2.36 ಕೋಟಿ ರೂ. ಪಾವತಿಸಲಾಗಿದ್ದು, ಸದರಿ ಕಟ್ಟಡಗಳನ್ನು ರೈಲ್ವೆ ಇಲಾಖೆ ಲೋಕೋಪಯೋಗಿ ಇಲಾಖೆ ಸ್ವಾಧೀನಕ್ಕೆ ನೀಡಿದೆ. ಖಾಸಗಿ ಒಡೆತನದ ಒಟ್ಟು 14 ವಸತಿಗೃಹಗಳ ಭೂಸ್ವಾಧೀನ ಪ್ರಕ್ರಿಯೆಗಾಗಿ 3.78 ಕೋಟಿ ರೂ. ಪಾವತಿಸಲು ಉಪವಿಭಾಗಾಧಿಕಾರಿ ಅವರು ಸೂಚಿಸಿದ್ದು, ಈಗಾಗಲೇ 2.40ಕೋಟಿ ರೂ. ಪಾವತಿಸಲಾಗಿದೆ. ಇನ್ನುಳಿದ ಮೆಸ್ಕಾಂನ ಜಾಗದ ಭೂಸ್ವಾಧೀನ ಪ್ರಕ್ರಿಯೆ ಪ್ರಗತಿಯಲ್ಲಿದ್ದು, ಅದನ್ನು ಆದಷ್ಟು ಬೇಗನೆ ಪೂರ್ಣಗೊಳಿಸುವಂತೆ ಸಚಿವರು ತಿಳಿಸಿದರು.

ರಸ್ತೆ ನಿರ್ಮಾಣಕ್ಕೆ ಅಡ್ಡಲಾಗಿರುವ ವಿದ್ಯುತ್‌ ಕಂಬಗಳ ತೆರವು ಪ್ರಕ್ರಿಯೆ ಆರಂಭಿಸಬೇಕು. ಅದರಂತೆ ಯುಜಿಡಿ ಪೈಪ್‌ಲೈನ್‌ ಸ್ಥಳಾಂತರಿಸುವ ಕಾಮಗಾರಿಗೆ ಅಂದಾಜುಪಟ್ಟಿಯಲ್ಲಿ 28ಲಕ್ಷ ರೂ. ಒದಗಿಸಲಾಗಿದೆ. ನೀರು ಸರಬರಾಜು ಕೊಳವೆಗಳ ಸ್ಥಳಾಂತರಕ್ಕಾಗಿ 18.50ಲಕ್ಷ ರೂ. ಪಾವತಿಸಲಾಗಿದ್ದು, ಟೆಂಡರ್‌ ಪ್ರಕ್ರಿಯೆ ಪ್ರಗತಿಯಲ್ಲಿದೆ. ಭೂಸ್ವಾ ಧೀನಗೊಂಡಿರುವ ರೈಲ್ವೆ ಇಲಾಖೆಯ ವಸತಿಗೃಹಗಳು ಮತ್ತು ಖಾಸಗಿ ವಸತಿಗೃಹ ಕಟ್ಟಡದ ನೆಲಸಮ ಮಾಡುವ ಕಾಮಗಾರಿ ಪ್ರಗತಿಯಲ್ಲಿದೆ ಎಂದು ಅವರು ಹೇಳಿದರು.

ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್‌ ಮತ್ತಿತರರು ಉಪಸ್ಥಿತರಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next