Advertisement
ಶುಕ್ರವಾರ ರಾತ್ರಿ ದಲಿತ ನಾಯಕ ಸತ್ಯಮೇವ ಜಯತೇ ಪಪ್ಪು ಎಂಬವರನ್ನು ಕೊಲೆ ಮಾಡಲಾಗಿತ್ತು. ಇದರಿಂದ ಕೆರಳಿದ ಅವರ ಅಪಾರ ಅಭಿಮಾನಿಗಳು ಹಿಂಸಾತ್ಮಕ ಪ್ರತಿಭಟನೆ ಆರಂಭಿಸಿದ್ದರು. ಈ ವೇಳೆ ಅಪ್ರಾಪ್ತ ವಯಸ್ಸಿನ ಬಾಲಕನೊಬ್ಬ ಕಾಲು¤ಳಿತಕ್ಕೆ ಸಿಲುಕಿ ಮೃತಪಟ್ಟಿದ್ದಾನೆ. ಈ ಘಟನೆಯಿಂದಾಗಿ ಇನ್ನಷ್ಟು ಕೆರಳಿದ ಜನರು ಕಲ್ಲು ತೂರಾಟ ನಡೆಸಿದ್ದಾರೆ. ಸ್ಥಳದಲ್ಲಿ ಭಾರೀ ಸಂಖ್ಯೆಯ ಪೊಲೀಸರನ್ನು ನಿಯೋಜಿಸಿ ಪರಿಸ್ಥಿತಿ ನಿಭಾಯಿಸಲಾಗುತ್ತಿದೆ. ಘಟನೆಯ ಬಗ್ಗೆ ಬಿಎಸ್‌ಪಿ ನಾಯಕಿ ಮಾಯಾವತಿ ಆಕ್ರೋಶ ವ್ಯಕ್ತ ಪಡಿಸಿದ್ದು, ಉತ್ತರ ಪ್ರದೇಶದ ಬಿಜೆಪಿ ಸರಕಾರ ಪರಿಸ್ಥಿತಿ ನಿರ್ವಹಣೆಯಲ್ಲಿ ವಿಫಲವಾಗಿದೆ ಎಂದು ಆರೋಪಿ ಸಿದ್ದಾರೆ. ಇದೇ ವೇಳೆ, ಮೃತರ ಕುಟುಂಬಕ್ಕೆ ಪರಿಹಾರ ಘೋಷಿಸಿರುವ ಸಿಎಂ ಯೋಗಿ ಆದಿತ್ಯನಾಥ್, ಹಿಂಸಾಚಾರ ನಡೆಸಿದವರ ವಿರುದ್ಧ ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ ಕೇಸು ದಾಖಲಿಸಿ, ಆಸ್ತಿಪಾಸ್ತಿಯನ್ನು ವಶಪಡಿಸಿಕೊಳ್ಳಿ ಎಂದು ಆದೇಶಿಸಿದ್ದಾರೆ. Advertisement
ದಲಿತ ನಾಯಕನ ಹತ್ಯೆ ಖಂಡಿಸಿ ಗಲಭೆ: ಕಾಲ್ತುಳಿತಕ್ಕೆ ಬಾಲಕ ಬಲಿ
12:24 AM Aug 16, 2020 | mahesh |
Advertisement
Udayavani is now on Telegram. Click here to join our channel and stay updated with the latest news.