Advertisement
ಪೊಲೀಸರ ವಿರುದ್ಧ ಅವಾಚ್ಯ ಶಬ್ದಗಳಲ್ಲಿ ನಿಂದಿಸಿದ ಹಾಗೂ ಪ್ರತಿಭಟನೆ ಮೂಲಕ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಲ್ಲಿ ದಾಖಲಾಗಿದ್ದ ಎರಡು ಎಫ್ಐಆರ್‌ಗಳನ್ನು ಪ್ರಶ್ನಿಸಿ ಶಾಸಕ ಹರೀಶ್ ಪೂಂಜ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾ| ಕೃಷ್ಣ ದೀಕ್ಷಿತ್ ಅವರ ಏಕಸದಸ್ಯ ನ್ಯಾಯಪೀಠ, ವ್ಯಕ್ತಿಯನ್ನು ಬಂಧಿಸಿದಾಗ ನ್ಯಾಯಾಲಯದ ಮೂಲಕ ಪರಿಹಾರ ಕಂಡು ಕೊಳ್ಳಲು ಪ್ರಯತ್ನಿಸುವುದು ಬಿಟ್ಟು ಜನಪ್ರತಿನಿಧಿಯೆಂಬ ಕಾರಣಕ್ಕೆ ಠಾಣೆ ಮುಂದೆ ಹೋಗಿ ಪ್ರತಿಭಟನೆ ಮಾಡುವುದು ಎಷ್ಟು ಸರಿ ಎಂದು ಶಾಸಕರ ನಡೆಯನ್ನು ಕಟುವಾಗಿ ಟೀಕಿಸಿದೆ.
Related Articles
Advertisement
ವಾದ ಆಲಿಸಿದ ನ್ಯಾಯಪೀಠ, ಸರಕಾರಕ್ಕೆ ನೋಟಿಸ್ ಜಾರಿ ಮಾಡಿ, ಮುಂದಿನ ವಿಚಾರಣೆಯವರೆಗೆ ಸಾವಧಾನದಿಂದ ಇರಿ. ಅರ್ಜಿದಾರರಿಗೆ ಯಾವುದೇ ತೊಂದರೆ ಮಾಡುವುದಕ್ಕೆ ಮುಂದಾಗ ಬೇಡಿ ಎಂದು ಸೂಚಿಸಿ ವಿಚಾರಣೆ ಮುಂದೂಡಿತು.
ಇಂದು ಪೊಲೀಸರ ವಿರುದ್ಧ ಧರಣಿ ಮಾಡು ವುದು, ಕಲ್ಲು ಎಸೆಯುವುದು, ಕರ್ತವ್ಯಕ್ಕೆ ಅಡ್ಡಿ ಪಡಿಸುವುದು ಸಾಮಾನ್ಯವಾಗಿದೆ. ಯಾವುದೋ ಒಂದು ಪ್ರಕರಣದಲ್ಲಿ ಪೊಲೀಸರಿಂದ ಒಬ್ಬರಿಗೆ ತೊಂದರೆ ಆಗಬಹುದು. ಆದರೆ, ಪೊಲೀಸರನ್ನು ನಾವು ರಕ್ಷಣೆ ಮಾಡಬೇಕಾಗಿದೆ. ಇಲ್ಲವಾದಲ್ಲಿ ಅವರು ಸೇವೆ ಸಲ್ಲಿಸುವುದಾದರೂ ಹೇಗೆ ಎಂದು ನ್ಯಾಯಪೀಠ ಇದೇ ವೇಳೆ ಪ್ರಶ್ನೆ ಮಾಡಿತು.
ಪೊಲೀಸರು ಯಾವುದೇ ವ್ಯಕ್ತಿಯನ್ನು ಬಂಧಿಸಿ ದಾಗ ನ್ಯಾಯಾಲಯದ ಮೂಲಕ ಪರಿಹಾರ ಕಂಡುಕೊಳ್ಳಲು ಮಾರ್ಗೋಪಾಯಗಳಿವೆ. ಸ್ಥಳೀಯ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಮೊರೆ ಹೋಗುವ ಅವಕಾಶವಿದೆ. ಅಕ್ರಮವಾಗಿ ಬಂಧಿಸಿದರೆ ಹೆಬಿಯಸ್ ಕಾರ್ಪಸ್ ಅರ್ಜಿ ಸಲ್ಲಿಸಿ ಪರಿಹಾರ ಕಂಡು ಕೊಳ್ಳ ಬಹುದು. ಇಂತಹ ಕ್ರಮಗಳನ್ನು ಕೈಗೊಳ್ಳದೆ, ಜನಪ್ರತಿನಿಧಿ ಎಂಬ ಕಾರಣಕ್ಕೆ ಠಾಣೆ ಮುಂದೆ ಹೋಗಿ ಪ್ರತಿಭಟನೆ ನಡೆಸುವುದು ಸರಿಯೇ ಎಂದು ನ್ಯಾಯಪೀಠ ಪ್ರಶ್ನಿಸಿತು.