Advertisement
ತಾಲೂಕಿನ ನಂದಗುಡಿ ಹೋಬಳಿಯ ಡಿ. ಶೆಟ್ಟಹಳ್ಳಿ ಗ್ರಾಮದಲ್ಲಿ ಹತ್ಯೆಯಾದ ಬಿಜೆಪಿ ಕಾರ್ಯಕರ್ತನ ಮನೆಗೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿ, ಪರಿಹಾರ ವಿತರಿಸಿದ ಅನಂತರ ಮಾಧ್ಯಮಗಳೊಂದಿಗೆ ಮಾತ ನಾಡಿದರು. ಫಲಿತಾಂಶ ಪ್ರಕಟವಾದ ಅನಂತರ ಬೇರೆ ಬೇರೆ ಜಿಲ್ಲೆಗಳಲ್ಲಿ ನಡೆದಿರುವ ಘಟನೆಗಳು ನಮ್ಮ ಗಮನಕ್ಕೆ ಬಂದಿವೆ. ನಮ್ಮ ಕಾರ್ಯಕರ್ತ ಕೃಷ್ಣಪ್ಪ ಅವರನ್ನು ಹತ್ಯೆ ಮಾಡಲಾಗಿದೆ. ಅವರ ಮಗ ಮತ್ತು ಪತ್ನಿ ಮೇಲೂ ಹಲ್ಲೆ ನಡೆಸಲಾಗಿದೆ ಎಂದು ದೂರಿದರು.
ಪಕ್ಷದ ನಾಯಕರು ಯಾವ ರೀತಿ ಇರುತ್ತಾರೆಯೋ ಕಾರ್ಯಕರ್ತರೂ ಅದೇ ರೀತಿ ಹೋಗುತ್ತಾರೆ. ಇಂತಹ ಗೂಂಡಾ
ಗಿರಿಗಳನ್ನು ಸಾಕಷ್ಟು ನೋಡಿದ್ದೇವೆ. ನಾವು ಸಹ ಕೈ ಕಟ್ಟಿ ಕೂರುವುದಿಲ್ಲ. ಘಟನೆಯ ಹಿಂದೆ ಯಾರಿದ್ದಾರೆಯೋ ಅವರನ್ನು ತತ್‌ಕ್ಷಣ ಬಂಧಿಸಬೇಕು. ಇಲ್ಲದಿದ್ದರೆ ಪಕ್ಷದ ವತಿಯಿಂದ ರಾಜ್ಯಾದ್ಯಂತ ಹೋರಾಟ ನಡೆಸುವುದು ಅನಿವಾರ್ಯ ಎಂದರು.
Related Articles
ಮಾಜಿ ಸಚಿವ ಎಂಟಿಬಿ ನಾಗರಾಜ್ ಮಾತನಾಡಿ, ಮೃತ ಕೃಷ್ಣಪ್ಪ ಅವರ ಮನೆಗೆ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಲಾಗಿದೆ. ಪಕ್ಷದ ವತಿಯಿಂದ 5 ಲಕ್ಷ ರೂ. ಪರಿಹಾರ ನೀಡಲಾಗಿದೆ. ಘಟನೆ ಕುರಿತು ಪೊಲೀಸ್ ಇಲಾಖೆ ಗಂಭೀರವಾಗಿ ಪರಿಗಣಿಸಬೇಕು. ಹತ್ಯೆ ಹಿನ್ನೆಲೆಯಲ್ಲಿ ಈಗಾಗಲೇ ಇಬ್ಬರನ್ನು ಬಂಧಿಸಿದ್ದು, ಇನ್ನುಳಿದ ಆರೋಪಿಗಳನ್ನು ಪತ್ತೆ ಹಚ್ಚಿ ಬಂಧಿಸಬೇಕು ಎಂದು ಆಗ್ರಹಿಸಿದರು. ಮಾಜಿ ಸಚಿವರಾದ ಕೆ.ಎಸ್. ಈಶ್ವರಪ್ಪ, ಭೈರತಿ ಬಸವರಾಜು, ಡಾ| ಅಶ್ವತ್ಥ ನಾರಾಯಣ, ಎಂಎಲ್ಸಿ ನಾರಾಯಣಸ್ವಾಮಿ ಸೇರಿ ಹಲವರು ಇದ್ದರು.
Advertisement