ಶಿವಮೊಗ್ಗ : ರಿಪ್ಪನ್ ಪೇಟೆಯ ಗ್ರಾಮ ಪಂಚಾಯತ್ ಸದಸ್ಯ ಮತ್ತು ಆತನ ಪತ್ನಿಯ ಮೇಲೆ 6 ಜನ ದುಷ್ಕರ್ಮಿಗಳ ಗುಂಪೊಂದು ಮಾರಣಾಂತಿಕ ದಾಳಿ ನಡೆಸಿದ ಘಟನೆ ಸೋಮವಾರ ರಾತ್ರಿ ನಡೆದಿದ್ದು, ಘಟನೆಯ ಬಳಿಕ ಗ್ರಾಮದಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದ್ದು ಬಿಗಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ.
ಆಸೀಫ್ ಮತ್ತುಅವರ ಪತ್ನಿಯ ಮೇಲೆ ದುಷ್ಕರ್ಮಿಗಳು ಹಳೆ ವೈಷಮ್ಯದ ಹಿನ್ನಲೆಯಲ್ಲಿ ದಾಳಿ ನಡೆಸಿ ಪರಾರಿಯಾಗಿದ್ದಾರೆ.
ದಾಳಿ ನಡೆದ ಬಳಿಕ ಸ್ಥಳೀಯರು ಗಾಯಾಳುಗಳನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಿದ್ದರು. ಆಸೀಫ್ ತಲೆಗೆ ಗಂಭೀರ ಗಾಯವಾಗಿರುವ ಹಿನ್ನಲೆಯಲ್ಲಿ ಮಣಿಪಾಲ ಆಸ್ಪತ್ರೆಗೆ ಕರೆತಂದು ಚಿಕಿತ್ಸೆ ನೀಡಲಾಗುತ್ತಿದೆ.
ದಾಳಿ ನಡೆಸಿದ 5 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಇನ್ನೋರ್ವನಿಗಾಗಿ ಶೋಧ ನಡೆಸುತ್ತಿದ್ದಾರೆ.
ರಿಪ್ಪನ್ ಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.