Advertisement
ಧರ್ಮಸ್ಥಳದ ವಸಂತ ಮಹಲ್‌ನಲ್ಲಿ ಶನಿವಾರ ಶ್ರೀ ಮಂಜುನಾಥ ಸ್ವಾಮಿ ದೇವಸ್ಥಾನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಬೆಂಗಳೂರಿನ ಸ್ವರಮೂರ್ತಿ ವಿ.ಎನ್. ರಾವ್ ಮೆಮೋರಿಯಲ್ ಟ್ರಸ್ಟ್‌ನ ಆಶ್ರಯದಲ್ಲಿ ನಡೆದ ವೀಣೆ ಶೇಷಣ್ಣ ಸ್ಮಾರಕ ಸಂಗೀತೋತ್ಸವದಲ್ಲಿ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪಾಶ್ವಾತ್ಯ ಸಂಗೀತದಿಂದ ಭಾರತೀಯ ಸಂಗೀತ ಕ್ಷೇತ್ರಕ್ಕೆ ಯಾವುದೇ ಅಪಾಯವಿಲ್ಲ. ವೀಣೆ ಶೇಷಣ್ಣ ಸಂಗೀತೋತ್ಸವದಂತಹ ಕಾರ್ಯಕ್ರಮಗಳು, ಹಿರಿಯ ಕಲಾವಿದರಿಗೆ ಗೌರವ, ವಿಚಾರ ಸಂಕಿರಣ, ಸಂಗೀತ ಕಲಿಯುವವರಿಗೆ ಪ್ರೋತ್ಸಾಹ ಇತ್ಯಾದಿಗಳ ಆಯೋಜನೆ ಭಾರತೀಯ ಸಂಗೀತ ಪರಂಪರೆಯನ್ನು ಉಳಿಸಿ – ಬೆಳೆಸಲು ಹೆಚ್ಚಿನ ಪ್ರೇರಣೆ ನೀಡುತ್ತವೆ. ಭಾರತೀಯ ಸಂಗೀತ ಪ್ರಕಾರದ ವಾದ್ಯಗಳನ್ನು, ಸಂಗೀತ ಪರಿಕರಗಳನ್ನು ಉಳಿಸುವ ಕಾರ್ಯ ಮಾಡಬೇಕು ಎಂದು ಡಾ| ಹೆಗ್ಗಡೆಯವರು ಸಲಹೆ ನೀಡಿದರು.
Related Articles
Advertisement
ಹೇಮಾವತಿ ವೀ. ಹೆಗ್ಗಡೆಯವರು ಸಮಾರಂಭ ಉದ್ಘಾಟಿಸಿದರು. ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ಡಾ| ಬಿ. ಯಶೋವರ್ಮ ಮತ್ತುಡಾ| ನಿಡಘಟ್ಟ ಗಂಗಾಧರ್ ಪ್ರಶಸ್ತಿ ಪತ್ರ ವಾಚಿಸಿದರು. ಸುಪ್ರಿಯಾ ಹಷೇìಂದ್ರ ಕುಮಾರ್ ಉಪಸ್ಥಿತರಿದ್ದರು. ವೀಣೆ ಶೇಷಣ್ಣ ಸ್ಮಾರಕ ಸಂಗೀತೋತ್ಸವ ಸ್ವಾಗತ ಸಮಿತಿ ಅಧ್ಯಕ್ಷ ಡಿ. ಹಷೇìಂದ್ರ ಕುಮಾರ್ ಸ್ವಾಗತಿಸಿದರು. ಶ್ಯಾಮಸುಂದರ ಶರ್ಮ ವಂದಿಸಿ
ದರು. ರಾಧಿಕಾ ಕಾರ್ಯಕ್ರಮ ನಿರ್ವಹಿಸಿದರು. ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಮತ್ತು ಬೆಂಗಳೂರಿನ ನ್ಯಾಶನಲ್‌ಎಜುಕೇಶನ್ ಸೊಸೈಟಿಯ ಅಧ್ಯಕ್ಷ ಎ.ಎಚ್. ರಾಮರಾವ್ ಮತ್ತು ಸುಧಾ ಆರ್. ರಾವ್ ಪ್ರಶಸ್ತಿಗಳನ್ನು ಪ್ರಾಯೋಜಿಸಿದ್ದಾರೆ. ಪ್ರಶಸ್ತಿ ಪ್ರದಾನ
ಧರ್ಮಸ್ಥಳ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಅವರು ಸಂಗೀತ ಕಲಾನಿಧಿ ಎ. ಕನ್ಯಾಕುಮಾರಿ ಅವರಿಗೆ ವೀಣೆ ಶೇಷಣ್ಣ ಸ್ಮಾರಕ ರಾಷ್ಟ್ರೀಯ ಪ್ರಶಸ್ತಿ ಹಾಗೂ ಸಂಗೀತ ಕಲಾರತ್ನ ನೀಲಾ ರಾಂಗೋಪಾಲ್ ಅವರಿಗೆ ಸ್ವರಮೂರ್ತಿ ವಿ.ಎನ್. ರಾವ್ ಸ್ಮಾರಕ ರಾಷ್ಟ್ರೀಯ ಪ್ರಶಸ್ತಿ ಪ್ರದಾನ ಮಾಡಿದರು. ಜತೆಗೆ ವೀಣೆ ಶೇಷಣ್ಣನವರ ಪುತ್ಥಳಿ, ಸೀರೆ, ಮಂಗಳ ದ್ರವ್ಯಗಳು, ಬೆಳ್ಳಿಯ ಸ್ಮರಣಿಕೆ ನೀಡಿ ಸಮ್ಮಾನಿಸಿದರು. ಈ ಎರಡೂ ಪ್ರಶಸ್ತಿಗಳು ತಲಾ ಒಂದು ಲಕ್ಷ ರೂ. ನಗದು ಸಹಿತವಾಗಿವೆ. ಸಂಗೀತ ಸುಧೆ
ಉಡುಪಿಯ ಪ್ರೊ| ಅರವಿಂದ ಹೆಬ್ಟಾರ್ ಮತ್ತು ಬಳಗದವರಿಂದ ವೃಂದ ಗಾಯನ, ಡಾ| ಸಹನಾ ಎಸ್.ವಿ. ಅವರಿಂದ ವೀಣಾ ವಾದನ ಕಛೇರಿ ನಡೆಯಿತು. ಪ್ರಶಸ್ತಿ ಪ್ರದಾನ ಸಮಾರಂಭದ ಬಳಿಕ ಸಂಗೀತ ಕಲಾನಿಧಿ ಎ. ಕನ್ಯಾಕುಮಾರಿ ವಯಲಿನ್ ವಾದನ ಕಛೇರಿ ನಡೆಸಿಕೊಟ್ಟರು.