ಮಂಗಳೂರು: ವಿಶ್ವಸಂಸ್ಥೆಯಲ್ಲಿ ಕನ್ನಡ ನುಡಿಯನ್ನು ಹೊಮ್ಮಿಸಿದ “ಕಾಂತಾರ’ ಸಿನೆಮಾದ ನಟ-ನಿರ್ದೇಶಕ ರಿಷಭ್ ಶೆಟ್ಟಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶಹಬ್ಟಾಸ್ ಹೇಳಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಬೊಮ್ಮಾಯಿ, ಹೆಮ್ಮೆಯ ಕನ್ನಡಿಗನೊಬ್ಬ ವಿಶ್ವಸಂಸ್ಥೆಯಲ್ಲಿ ಭಾರತವನ್ನು ಪ್ರತಿನಿಧಿಸಿ ಕನ್ನಡದಲ್ಲಿ ಮಾತನಾಡಿರುವುದು ನಿಜಕ್ಕೂ ಅದ್ಭುತ. ಅಭಿನಂದನೆಗಳು. ರಿಷಬ್, ನಿಮ್ಮ ಕನ್ನಡ ಪ್ರೇಮಕ್ಕೆ ಹೃದಯಾಂತರಾಳ ದಿಂದ ಗೌರವ ಅರ್ಪಿಸುತ್ತಿದ್ದೇನೆ ಎಂದು ಬರೆದುಕೊಂಡಿದ್ದಾರೆ. ಮಾತ್ರವಲ್ಲದೆ, ವಿಶ್ವಸಂಸ್ಥೆಯಲ್ಲಿ ಕನ್ನಡ ಧ್ವನಿಯನ್ನು ಹೊಮ್ಮಿಸಿರುವ ರಿಷಬ್‌ಗ ಜಗತ್ತಿನ ಮೂಲೆಮೂಲೆಗಳಿಂದ ಲಕ್ಷಾಂತರ ಕನ್ನಡಿಗರಿಂದ ಅಭಿನಂದನೆ, ಮೆಚ್ಚುಗೆಯ ಮಹಾಪೂರವೇ ಹರಿದುಬಂದಿದೆ.