ಹೊಸದಿಲ್ಲಿ: ಭೀಕರ ರಸ್ತೆ ಅಪಘಾತದಲ್ಲಿ ಭಾರತದ ತಂಡದ ವಿಕೆಟ್ ಕೀಪರ್ ರಿಷಭ್ ಪಂತ್ ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ. ರಿಷಭ್ ಪಂತ್ ಶುಕ್ರವಾರ ಬೆಳಗ್ಗೆ ಉತ್ತರಾಖಂಡದಿಂದ ದೆಹಲಿಗೆ ಹಿಂದಿರುಗುತ್ತಿದ್ದಾಗ ಅವರ ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ.
ಹಮ್ಮದ್‌ಪುರ ಝಾಲ್ ಬಳಿ ರೂರ್ಕಿಯ ನರ್ಸನ್ ಗಡಿಯಲ್ಲಿ ಅವರ ಕಾರು ಅಪಘಾತಕ್ಕೀಡಾಗಿದೆ. ರಿಷಭ್ ಅವರನ್ನು ದೆಹಲಿಯ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಅಲ್ಲಿ ಅವರ ಪ್ಲಾಸ್ಟಿಕ್ ಸರ್ಜರಿ ಮಾಡಲಾಗುವುದು ಎಂದು ದೈನಿಕ್ ಜಾಗರಣ್ ವರದಿ ಮಾಡಿದ್ದಾರೆ.
ಇದನ್ನೂ ಓದಿ:ಶತಮಾನದ ದೀಪ ಪರಮಾತ್ಮನ ಪಾದದಲ್ಲಿ ಲೀನ: ಭಾವುಕರಾದ ಪ್ರಧಾನಿ ಮೋದಿ
ವೈದ್ಯರ ಪ್ರಕಾರ, ರಿಷಬ್ ಪಂತ್ ಅವರ ಹಣೆ ಮತ್ತು ಕಾಲಿಗೆ ಗಾಯಗಳಾಗಿವೆ. ಸದ್ಯ ರಿಷಬ್ ಪಂತ್ ಅವರ ಸ್ಥಿತಿ ಸ್ಥಿರವಾಗಿದ್ದು, ಅವರನ್ನು ರೂರ್ಕಿಯಿಂದ ದೆಹಲಿಗೆ ಕಳುಹಿಸಲಾಗುತ್ತಿದೆ ಎಂದು ಸಕ್ಷಮ್ ಆಸ್ಪತ್ರೆಯ ಅಧ್ಯಕ್ಷ ಡಾ ಸುಶೀಲ್ ನಗರ್ ತಿಳಿಸಿದ್ದಾರೆ.
ಪ್ರತ್ಯಕ್ಷದರ್ಶಿಗಳ ಪ್ರಕಾರ, ರಿಷಬ್ ಅವರ ಕಾರು ರೇಲಿಂಗ್‌ಗೆ ಡಿಕ್ಕಿ ಹೊಡೆದ ನಂತರ ಕಾರಿಗೆ ಬೆಂಕಿ ಹೊತ್ತಿಕೊಂಡಿದೆ. ಬಹಳ ಕಷ್ಟಪಟ್ಟು ಬೆಂಕಿಯನ್ನು ಹತೋಟಿಗೆ ತರಲಾಯಿತು. ಅದೇ ವೇಳೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ರಿಷಬ್ ಪಂತ್ ಅವರನ್ನು ದೆಹಲಿ ರಸ್ತೆಯಲ್ಲಿರುವ ಸಕ್ಷಮ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.