ನವದೆಹಲಿ : ದಕ್ಷಿಣ ಆಫ್ರಿಕಾ ವಿರುದ್ಧದ ಟಿ 20 ಸರಣಿಯಲ್ಲಿ ಭಾರತ ತಂಡವನ್ನು ಮುನ್ನಡೆಸಬೇಕಿದ್ದ ಕೆಎಲ್ ರಾಹುಲ್ ಗಾಯದ ಕಾರಣದಿಂದಾಗಿ ಸರಣಿಯಿಂದ ಹೊರಗುಳಿಯಬೇಕಾಗಿದೆ. ವಿಕೆಟ್ ಕೀಪರ್, ಬ್ಯಾಟ್ಸ್‌ಮನ್ ರಿಷಬ್ ಪಂತ್ ಅವರು ನಾಯಕತ್ವವನ್ನು ವಹಿಸಲಿದ್ದಾರೆ.
ಇದೆ ವೇಳೆ ಭಾರತ ತಂಡದ ಸ್ಪಿನ್ನರ್ ಕುಲದೀಪ್ ಯಾದವ್ ಅವರು ಐದು ಪಂದ್ಯಗಳ ಟಿ20 ಸರಣಿಯಿಂದ ಹೊರಗುಳಿದಿದ್ದಾರೆ.
ಅಖಿಲ ಭಾರತ ಹಿರಿಯ ಆಯ್ಕೆ ಸಮಿತಿಯು ದಕ್ಷಿಣ ಆಫ್ರಿಕಾ ವಿರುದ್ಧದ ಸ್ವದೇಶಿ ಸರಣಿಗೆ ವಿಕೆಟ್ ಕೀಪರ್ ರಿಷಬ್ ಪಂತ್ ಅವರನ್ನು ನಾಯಕ ಮತ್ತು ಹಾರ್ದಿಕ್ ಪಾಂಡ್ಯ ಅವರನ್ನು ಉಪನಾಯಕರನ್ನಾಗಿ ನೇಮಿಸಿದೆ ಎಂದು ಬಿಸಿಸಿಐ ಪ್ರಕಟಣೆಯಲ್ಲಿ ತಿಳಿಸಿದೆ.
ಮಂಗಳವಾರ ಸಂಜೆ ನೆಟ್ಸ್‌ನಲ್ಲಿ ಬ್ಯಾಟಿಂಗ್ ಮಾಡುತ್ತಿರುವಾಗ ಕುಲದೀಪ್ ಯಾದವ್ ಅವರ ಬಲಗೈಗೆ ಪೆಟ್ಟಾಗಿದ್ದು, ರಾಹುಲ್ ಅವರ ಬಲ ತೊಡೆಗೆ ಗಾಯವಾಗಿದೆ ಎಂದು ಬಿಸಿಸಿಐ ಬಹಿರಂಗಪಡಿಸಿದೆ.
ಪಂದ್ಯದ ವೇಳಾಪಟ್ಟಿ
ಜೂನ್ 09 ರಂದು ದೆಹಲಿಯಲ್ಲಿ ಸರಣಿಯ ಮೊದಲ ಟಿ 20 ಪಂದ್ಯ ನಡೆಯಲಿದೆ. 12 ರಂದು ಕಟಕ್ ನಲ್ಲಿ 2 ನೇ ಪಂದ್ಯ, 14 ವಿಶಾಖಪಟ್ಟಣಂ ನಲ್ಲಿ ಮೂರನೇ ಪಂದ್ಯ, 17 ರಂದು ರಾಜಕೋಟ್ ನಲ್ಲಿ ನಾಲ್ಕನೇ ಪಂದ್ಯ ಮತ್ತು 19 ರಂದು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ನಲ್ಲಿ ಸರಣಿಯ ಕೊನೆಯ ಪಂದ್ಯ ನಡೆಯಲಿದೆ. ಎಲ್ಲಾ ಪಂದ್ಯಗಳು ಸಂಜೆ 7 ಗಂಟೆಯಿಂದ ಆರಂಭವಾಗಲಿದೆ.