ಹೊಸದಿಲ್ಲಿ: ವೆಸ್ಟ್ ಇಂಡೀಸ್ ವಿರುದ್ಧ ಫೆ. 6ರಂದು ನಡೆಯಲಿರುವ ಏಕದಿನ ಸರಣಿಯ ಮೊದಲ ಪಂದ್ಯಕ್ಕೆ ವಿಕೆಟ್ ಕೀಪರ್ ರಿಷಭ್ ಪಂತ್ ಉಪನಾಯಕನಾಗಿ ಕಾರ್ಯ ನಿರ್ವಹಿಸುವ ಸಾಧ್ಯತೆ ಇದೆ.
ಉಪನಾಯಕ ಕೆ.ಎಲ್. ರಾಹುಲ್ ಮೊದಲ ಪಂದ್ಯದಿಂದ ವಿಶ್ರಾಂತಿ ಬಯಸಿರುವ ಹಿನ್ನೆಲೆಯಲ್ಲಿ ಪಂತ್‌ಗೆ ಈ ಅದೃಷ್ಟ ಒಲಿಯಬಹುದು ಎಂದು ಮಂಡಳಿ ಮೂಲವೊಂದು ಹೇಳಿದೆ.
“ಕಳೆದ ವರ್ಷದ ಶ್ರೀಲಂಕಾ ಪ್ರವಾಸದಲ್ಲಿ ಭಾರತ ತಂಡವನ್ನು ಮುನ್ನಡೆಸಿದ್ದ ಶಿಖರ್ ಧವನ್ ಹೆಸರು ಉಪನಾಯಕನ ಸ್ಥಾನಕ್ಕೆ ಕೇಳಿ ಬರುತ್ತಿದ್ದರೂ ಭವಿಷ್ಯದ ದೃಷ್ಟಿಯಿಂದ ರಿಷಭ್ ಪಂತ್ ಹೆಚ್ಚು ಸೂಕ್ತ ಎಂಬ ಅಭಿಪ್ರಾಯವಿದೆ.
ಇದನ್ನೂ ಓದಿ:ದೇಶದ ಹೊಸ ಸ್ಟಾರ್ಟ್‌ಅಪ್ ಕ್ಯಾಪಿಟಲ್ ಆಗಿ ಹೊರಹೊಮ್ಮಿದ ನವದೆಹಲಿ !
ಪಂತ್ ಐಪಿಎಲ್‌ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಮುನ್ನಡೆಸಿದ ಅನುಭವವನ್ನೂ ಹೊಂದಿದ್ದಾರೆ. ಈ ನಿಟ್ಟಿನಲ್ಲಿ ಪಂತ್ ಮೊದಲ ಆಯ್ಕೆ ಆಗಲಿದ್ದಾರೆ’ ಎಂದು ಬಿಸಿಸಿಐ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.