ನವದೆಹಲಿ: ಜಿ20 ಶೃಂಗಕ್ಕಾಗಿ ದೆಹಲಿಗೆ ಆಗಮಿಸಿದ್ದ ಬ್ರಿಟನ್ ಪ್ರಧಾನಿ ರಿಷಿ ಸುನಕ್ ಅವರು ತನಗಿಂತ ಹಿರಿಯರಾದ ಬಾಂಗ್ಲಾದೇಶ ಪ್ರಧಾನಿ ಶೇಕ್ ಹಸೀನಾ ಅವರ ಬಳಿ ಮಂಡಿಯೂರಿ ನಿಂತು ಮಾತನಾಡುತ್ತಿರುವ ಫೋಟೋವೊಂದು ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್ ಆಗಿದೆ.
ದೆಹಲಿಯಲ್ಲಿ ಸೆಪ್ಟೆಂಬರ್ 9 ಹಾಗೂ 10 ರಂದು ಎರಡು ದಿನಗಳ ಕಾಲ ನಡೆದ ಜಿ20 ಶೃಂಗಸಭೆಗೆ ಹಲವು ದೇಶದ ಗಣ್ಯರು ಆಗಮಿಸಿದ್ದಾರೆ.
ಶನಿವಾರ ಮತ್ತು ಭಾನುವಾರ ಈರದು ದಿನಗಳ ನಡೆದ ಶೃಂಗಸಭೆಯ ಭಾಗವಾಗಿ ಭಾನುವಾರ ಬೆಳಿಗ್ಗೆ ಜಾಗತಿಕ ನಾಯಕರು ರಾಜಘಾಟ್ ನಲ್ಲಿರುವ ಮಹಾತ್ಮಾ ಗಾಂಧೀಜಿ ಅವರ ಸಮಾಧಿಗೆ ಪುಷ್ಪ ನಮನ ಸಲ್ಲಿಸಲು ಬಂದಿದ್ದಾರೆ. ಈ ವೇಳೆ ಅಲ್ಲೇ ಕುಳಿತಿದ್ದ ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಅವರು ಕುರ್ಚಿಯಲ್ಲಿ ಕುಳಿತ್ತಿದ್ದರು ಇದನ್ನು ಗಮನಿಸಿದ ರಿಷಿ ಸುನಾಕ್ ಹಸೀನಾ ಅವರ ಬಳಿ ತೆರಳಿ ಮಂಡಿಯೂರಿ ಅವರೊಂದಿಗೆ ವಿನಮ್ರತೆಯಿಂದ ಮಾತುಕತೆ ನಡೆಸಿದ್ದಾರೆ.
ಬಾಂಗ್ಲಾ ಪ್ರಧಾನಿ ಜೊತೆ ಮಾತುಕತೆ ನಡೆಸಿರುವ ಫೋಟೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ಹಿರಿಯರೊಂದಿಗೆ ರಿಷಿ ಅವರು ನಡೆದುಕೊಂಡ ರೀತಿಗೆ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ. ಅಲ್ಲದೆ ಹಲವಾರು ಮಂದಿ ಮೆಚ್ಚುಗೆಯನ್ನು ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ: AR Rahman ಕಾರ್ಯಕ್ರಮದಲ್ಲಿ ಕಾಲ್ತುಳಿತ: ಜನದಟ್ಟಣೆಯಲ್ಲಿ ಮಹಿಳೆಯರಿಗೆ ಕಿರುಕುಳ