Advertisement

ಅಪಾಯದ ಮಟ್ಟದಲ್ಲಿ ನೇತ್ರಾವತಿ ; ಸುರಕ್ಷಿತ ಸ್ಥಳಗಳಿಗೆ ತೆರಳಲು ಡಿಸಿ ಸೂಚನೆ

10:03 AM Aug 10, 2019 | Team Udayavani |

ಮಂಗಳೂರು: ದಕ್ಷಿಣ ಕನ್ನಡದ ಜೀವನದಿ ನೇತ್ರಾವತಿ ತುಂಬಿ ಹರಿಯುತ್ತಿದೆ. ಕಳೆದ 24 ಗಂಟೆಗಳಲ್ಲಿ ನದಿಗೆ ಭಾರೀ ಪ್ರಮಾಣದಲ್ಲಿ ನೀರು ಹರಿದುಬರುತ್ತಿರುವುದರಿಂದ ನದೀ ಪಾತ್ರದ ತಗ್ಗು ಪ್ರದೇಶಗಳಿಗೆ ನೆರೆ ನೀರು ನುಗ್ಗಿದೆ.

Advertisement

ಇದೀಗ ನದಿಯು ಅಪಾಯದ ಮಟ್ಟದಲ್ಲಿ ಹರಿಯುತ್ತಿರುವುದರಿಂದ ತೀರಪ್ರದೇಶದ ನಿವಾಸಿಗಳು ತಕ್ಷಣವೇ ಸುರಕ್ಷಿತ ಸ್ಥಳಗಳಿಗೆ ತೆರಳಬೇಕೆಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಅವರು ಪತ್ರಿಕಾ ಪ್ರಕಟನೆ ಮೂಲಕ ತಿಳಿಸಿದ್ದಾರೆ.

ಮಳೆ ಮತ್ತು ಪ್ರವಾಹದಿಂದ ಎದುರಾಗಬಹುದಾಗಿರುವ ಯಾವುದೇ ಸಂಭವನೀಯ ಅಪಾಯಗಳನ್ನು ಎದುರಿಸಲು ಜಿಲ್ಲಾಡಳಿತ ಮತ್ತು ಸ್ಥಳೀಯ ಅಧಿಕಾರಿಗಳು ಸನ್ನದ್ಧರಾಗಿದ್ದಾರೆ. ಈಗಾಗಲೇ ನದಿತೀರದ ಸಂಭಾವ್ಯ ಅಪಾಯ ಸ್ಥಳಗಳಲ್ಲಿ ಅಧಿಕಾರಿಗಳು ಮೊಕ್ಕಾಂ ಹೂಡಿದ್ದಾರೆ.

ಮಳೆ ಮತ್ತು ಪ್ರವಾಹದಿಂದ ಎದುರಾಗಬಹುದಾಗಿರುವ ಯಾವುದೇ ಸಂಭವನೀಯ ಅಪಾಯಗಳನ್ನು ಎದುರಿಸಲು ಜಿಲ್ಲಾಡಳಿತ ಮತ್ತು ಸ್ಥಳೀಯ ಅಧಿಕಾರಿಗಳು ಸನ್ನದ್ಧರಾಗಿದ್ದಾರೆ. ಈಗಾಗಲೇ ನದಿತೀರದ ಸಂಭಾವ್ಯ ಅಪಾಯ ಸ್ಥಳಗಳಲ್ಲಿ ಅಧಿಕಾರಿಗಳು ಮೊಕ್ಕಾಂ ಹೂಡಿದ್ದಾರೆ. ಉಪ್ಪಿನಂಗಡಿಯಿಂದ ಮಂಗಳೂರುವರೆಗೆ ನೇತ್ರಾವತಿ ನದಿತೀರದ ಎರಡೂ ಬದಿಗಳ ಪ್ರದೇಶಗಳಲ್ಲಿ ವಾಸಿಸುವ ನಾಗರಿಕರು ತಕ್ಷಣದಿಂದಲೇ ತಮ್ಮ ಕುಟುಂಬದೊಂದಿಗೆ ಸುರಕ್ಷಿತ ಸ್ಥಳಗಳಿಗೆ ತೆರಳಬೇಕು ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next