Advertisement

ಆರ್‌ ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್‌ ಆರೋಗ್ಯ ಗಂಭೀರ: ಆಸ್ಪತ್ರೆಗೆ ದಾಖಲು

09:42 AM Sep 02, 2019 | Team Udayavani |

ಪಾಟ್ನಾ: ಆರ್‌ ಜೆಡಿ ಮುಖ್ಯಸ್ಥ, ಬಿಹಾರದ ಮಾಜಿ ಮುಖ್ಯಮಂತ್ರಿ ಲಾಲೂ ಪ್ರಸಾದ್‌ ಯಾದವ್‌ ಅವರು ಕಿಡ್ನಿ ಸೋಂಕಿನಿಂದ ಬಳಲುತ್ತಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

Advertisement

ಲಾಲೂ ಪ್ರಸಾದ್‌ ಯಾದವ್‌ ಅವರ ಕಿಡ್ನಿಗಳು ಸರಿಯಾಗಿ ಕಾರ್ಯ ನಿರ್ವಹಿಸುತ್ತಿಲ್ಲ. ಕೇವಲ ಶೇ 37 ಮಾತ್ರ ಕಿಡ್ನಿ ಕೆಲಸ ಮಾಡುತ್ತಿದೆ. ಕಳೆದ ಒಂದು ವಾರದಿಂದ ಅವರ ಆರೋಗ್ಯ ಸ್ಥಿರವಾಗಿಲ್ಲ ಎಂದು ವೈದ್ಯಕೀಯ ಮೂಲಗಳು ತಿಳಿಸಿವೆ.

ಲಾಲೂ ಪ್ರಸಾದ್‌ ಯಾದವ್‌ ಅವರು ಮಧುಮೇಹ, ರಕ್ತದೊತ್ತಡ ಮತ್ತು ಇತರ ವಯೋ ಸಹಜ ಕಾಯಿಲೆಗಳಿಂದ ಬಳಲುತ್ತಿದ್ದಾರೆ.

71ರ ಹರೆಯದ ಲಾಲೂ ಪ್ರಸಾದ್‌ ಯಾದವ್‌ ಅವರು ಮೇವು ಹಗರಣದ ಸಂಬಂಧಿಸಿದಂತೆ 2017ರಿಂದ ಜೈಲು ಶಿಕ್ಷೆ ಅನುಭವಿಸುತ್ತಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next