ಬಿಹಾರ: ವಾಕಿಂಗ್ ಹೊರಟಿದ್ದ ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ನಾಯಕ ಮತ್ತು ರಾಜ್ಯ ಪ್ರಧಾನ ಕಾರ್ಯದರ್ಶಿ ಪಂಕಜ್ ಯಾದವ್ ಅವರ ಮೇಲೆ ದುಷ್ಕರ್ಮಿಗಳ ತಂಡವೊಂದು ಗುಂಡಿನ ದಾಳಿ ನಡೆಸಿರುವ ಘಟನೆ ಬಿಹಾರದ ಮುಂಗೇರ್‌ನಲ್ಲಿ ಗುರುವಾರ (ಅ.3) ರಂದು ಮುಂಜಾನೆ ಸಂಭವಿಸಿದೆ.
ಘಟನೆಯಿಂದ ಪಂಕಜ್ ಯಾದವ್ ಅವರ ಸ್ಥಿತಿ ಗಂಭೀರವಾಗಿದ್ದು ಕೂಡಲೇ ಅಲ್ಲಿನ ಸ್ಥಳೀಯರು ಪಂಕಜ್ ಅವರನ್ನು ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.
ಈ ಕುರಿತು ಹೇಳಿಕೆ ನೀಡಿರುವ ಆರ್‌ಜೆಡಿ ಮಾಜಿ ಶಾಸಕ ವಿಜಯ್ ಕುಮಾರ್, ಯಾದವ್ ಅವರು ಪ್ರತಿದಿನ ಬೆಳಗ್ಗೆ ವಾಕಿಂಗ್ ಹೋಗುತ್ತಿದ್ದರು. ಈ ನಡುವೆ ಬೈಕ್ ನಲ್ಲಿ ಬಂದ ಇಬ್ಬರು ಯಾದವ್ ಅವರನ್ನು ಸುಮಾರು ಒಂದು ಕಿಲೋಮೀಟರ್ ದೂರದ ವರೆಗೆ ಹಿಂಬಾಲಿಸಿ ಬಳಿಕ ಹಲವು ಸುತ್ತು ಗುಂಡಿನ ದಾಳಿ ನಡೆಸಿದ್ದಾರೆ ಆದರೆ ಈ ವೇಳೆ ಯಾದವ್ ಅವರು ದಾಳಿಕೋರರಿಂದ ತಪ್ಪಿಸ್ಕೊಳ್ಳಲು ಯತ್ನಿಸಿದ್ದಾರೆ ಈ ನಡುವೆ ಒಂದು ಗುಂಡು ಅವರ ಎದೆಗೆ ಹೊಕ್ಕಿದೆ ಪರಿಣಾಮ ಗಂಭೀರ ಗಾಯಗೊಂಡ ಅವರನ್ನು ಅಲ್ಲಿನ ಸ್ಥಳೀಯರು ಕೂಡಲೇ ಆಸ್ಪತ್ರೆಗೆ ದಾಖಲಿಸಿದ್ದಾರೆ ಘಟನೆ ನಡೆದ ಬಳಿಕ ದುಷ್ಕರ್ಮಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ಹೇಳಿದ್ದಾರೆ.
ಸದ್ಯ ಯಾದವ್ ಅರೋಗ್ಯ ಚೇತರಿಸಿಕೊಳ್ಳುತ್ತಿದೆ ಎಂದು ಆಸ್ಪತ್ರೆ ವೈದ್ಯರು ಮಾಹಿತಿ ನೀಡಿದ್ದಾರೆ.
ಆರೋಪಿಗಳಲ್ಲಿ ಒಬ್ಬ ಕ್ರಿಮಿನಲ್ ಹಿನ್ನೆಲೆ ಹೊಂದಿದ್ದು, ಆತನ ಸಂಪರ್ಕದ ಬಗ್ಗೆ ಮಾಹಿತಿ ಕಲೆಹಾಕಲಾಗುತ್ತಿದೆ ಎಂದು ಉನ್ನತ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಇದನ್ನೂ ಓದಿ: Isha Foundation: ಈಶ ಫೌಂಡೇಶನ್ ವಿರುದ್ಧ ತನಿಖೆ-ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ತಡೆ