Advertisement

Ramanagara: ಟೋಲ್ ದರ ಹೆಚ್ಚಳ ವಿರೋಧಿಸಿ ಪ್ರತಿಭಟನೆ… ರಸ್ತೆ ತಡೆ, ಹಲವರು ವಶಕ್ಕೆ

01:34 PM Jun 24, 2023 | Team Udayavani |

ರಾಮನಗರ: ಬೆಂಗಳೂರು – ಮೈಸೂರು ದಶಪಥ ಹೆದ್ದಾರಿಯ ಟೋಲ್ ದರ ಹೆಚ್ಚಳ ವಿರೋಧಿಸಿ ವಿವಿಧ ಕನ್ನಡಪರ ಸಂಘಟನೆಗಳಿಂದ ಶನಿವಾರ ಪ್ರತಿಭಟನೆ ನಡೆಯಿತು.
ಕುಂಬಳಗೂಡು ಬಳಿಯ ಕಣಮಿಣಿಕಿ ಟೋಲ್ ಬಳಿ ಪ್ರತಿಭಟನೆ ನಡೆದಿದ್ದು. ಪ್ರತಿಭಟನಾಕಾರರು ಹೆದ್ದಾರಿ ಪ್ರಾಧೀಕಾರದ ವಿರುದ್ದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು .

Advertisement

ಶೇ 22 ರಷ್ಟು ಟೋಲ್ ದರವನ್ನು ಹೆಚ್ಚಳ ಮಾಡಿರೋ ಹೆದ್ದಾರಿ ಪ್ರಾಧೀಕಾರ. ಈ ಕೂಡಲೇ ಹೆಚ್ಚಾಗಿರುವ ಟೋಲ್ ದರ ಇಳಿಸುವಂತೆ ರಸ್ತೆಯಲ್ಲೇ ಮಲಗಿ ಹೆದ್ದಾರಿ ಪ್ರಾಧಿಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರೆ. ಕನ್ನಡಪರ ಕಾರ್ಯಕರ್ತರಿಂದ ಉರುಳುಸೇವೆ ನಡೆಸಿ ಕೇಂದ್ರ ಸರಕಾರದ ವಿರುದ್ಧ ಘೋಷಣೆ ಕೂಗಿದರು.

ರಸ್ತೆ ತಡೆಗೆ ಯತ್ನ ಹಲವರ ಬಂಧನ:
ಪ್ರತಿಭಟನೆ ವೇಳೆ ಪ್ರತಿಭಟನಾಕಾರರು ರಸ್ತೆ ತಡೆಯಲು ಮುಂದಾದ ಘಟನೆ ನಡೆದಿದೆ ಈ ವೇಳೆ ಮಧ್ಯ ಪ್ರವೇಶಿಸಿದ ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದುಕೊಂಡಿದ್ದಾರೆ, ಈ ನಡುವೆ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಮಾತಿನ ಚಕಮಕಿ ನಡೆಯಿತು.

ಇದನ್ನೂ ಓದಿ: ಸಹೋದರಿಗೆ ಕಿರುಕುಳ ನೀಡಿದ್ದನ್ನು ಪ್ರಶ್ನಿಸಿದ ಸಹೋದರನನ್ನೇ ಚಾಕುವಿನಿಂದ ಇರಿದು ಹತ್ಯೆ

Advertisement

Udayavani is now on Telegram. Click here to join our channel and stay updated with the latest news.

Next