ಬೆಂಗಳೂರು: ರಸ್ತೆಗುಂಡಿಗೆ ಬಿದ್ದು ಯುವಕನೊಬ್ಬ ಸಾವನ್ನಪ್ಪಿರುವ ಘಟನೆ ಎಂಎಸ್ ಪಾಳ್ಯದ ಮುನೇಶ್ವರ ಲೇಔಟ್ ನಲ್ಲಿ ರವಿವಾರ ರಾತ್ರಿ ನಡೆದಿದೆ.
ಅಶ್ವಿನ್ ( 27) ಮೃತ ಯುವಕ ಎಂದು ತಿಳಿದು ಬಂದಿದೆ.
ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಅಶ್ವಿನ್ ರವಿವಾರ ರಾತ್ರಿ ಮುನೇಶ್ವರ ಲೇಔಟ್ ರಸ್ತೆಯಲ್ಲಿ ಬರುವಾಗ ಜಲಮಂಡಳಿ ಅಗೆದಿದ್ದ ರಸ್ತೆಗುಂಡಿಗೆ ಬಿದ್ದು ಸಾವನ್ನಪ್ಪಿದ್ದಾನೆ.
ಜಲಮಂಡಳಿ ನಿರ್ಲಕ್ಷ್ಯವೇ ಘಟನೆಗೆ ಕಾರಣವೆಂದು ಸಂಬಂಧಿಕರು, ಸ್ನೇಹಿತರು ಆಕ್ರೋಶ ಹೊರ ಹಾಕಿದ್ದಾರೆ.
ಸವಾರ ಮದ್ಯಪಾನ ಮಾಡಿ ಬೈಕ್ ಚಲಾಯಿಸಿದ್ದಾರೆ ಎನ್ನಲಾಗಿದ್ದು, ಬೈಕ್ ಚಲಾಯಿಸುವ ವೇಳೆ ಹೆಲ್ಮೆಟ್ ಹಾಕಿರಲಿಲ್ಲ ಎಂದು ಸಂಚಾರಿ ಪೊಲೀಸರು ಹೇಳಿದ್ದು, ಈ ಬಗ್ಗೆ ವೈದ್ಯಕೀಯ ವರದಿ ಕೈ ಸೇರಬೇಕಿದೆ ಎಂದು ಹೇಳಿದ್ದಾರೆ.
ಯಲಹಂಕ ಸಂಚಾರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.