Advertisement

ಆಟೋ ಡಿಕ್ಕಿ: ಬೈಕ್ ಸವಾರ ಸಾವು

07:44 PM Dec 11, 2020 | Suhan S |

ಮಂಡ್ಯ: ಗೂಡ್ಸ್ ಆಟೋ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವಿಗೀಡಾದ ಘಟನೆ ಪಾಂಡವಪುರ ಪಟ್ಟಣದ ಟಿಎಪಿಸಿಎಂಎಸ್ ಕಲ್ಯಾಣ ಮಂಟಪದ ಬಳಿ ಗುರುವಾರ ರಾತ್ರಿ ನಡೆದಿದೆ.

Advertisement

ಪಾಂಡವಪುರ ಬಸವನಗುಡಿ ಬೀದಿಯ ಶರೀಫ್ ಪಾಷ ಅವರ ಪುತ್ರ ಯಾಸೀನ್ ಶರೀಫ್(24) ಮೃತ ಯುವಕ.

ಕೆಲಸದ ನಿಮಿತ್ತ ಯಾಸೀನ್ ಶರೀಫ್ ಗುರುವಾರ ರಾತ್ರಿ ತಾಲ್ಲೂಕಿನ ಡಾಮಡಹಳ್ಳಿ ಗ್ರಾಮದಲ್ಲಿರುವ ತನ್ನ ಮಾವನ ಮನೆಗೆ ಹೋಗಿದ್ದು, ಹಿಂತಿರುಗುವ ವೇಳೆ ಪಟ್ಟಣದ ಟಿಎಪಿಸಿಎಂಎಸ್ ಕಲ್ಯಾಣ ಮಂಟಪದ ಬಳಿ ಬರುತ್ತಿದ್ದಾಗ ಎದುರಿನಿಂದ ಬಂದ ಆಪೆ ಗೂಡ್ಸ್ ಆಟೋ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ತೀವ್ರವಾಗಿ ಗಾಯಗೊಂಡ ಯಾಸೀನ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ : ಮಂಡ್ಯ : ಕುಡಿದ ಮತ್ತಿನಲ್ಲಿ ಮಾವನನ್ನು ಕೊಡಲಿಯಿಂದ ಕೊಚ್ಚಿ ಕೊಂದ ಅಳಿಯ

ಪಾಂಡವಪುರ ಸರ್ಕಾರಿ ಆಸ್ಪತ್ರೆಯ ಶವಾಗಾರದಲ್ಲಿ ಮೃತನ ಮರಣೋತ್ತರ ಪರೀಕ್ಷೆ ನಡೆಸಿ ವಾರಸುದಾರರಿಗೆ ಒಪ್ಪಿಸಲಾಗಿದೆ. ಪಾಂಡವಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next