Advertisement

ಕಾರು – ಟ್ರಕ್‌ ಮುಖಾಮುಖಿ ಢಿಕ್ಕಿ: ಕಾರಿನಲ್ಲಿದ್ದ ಐವರು ಸ್ಥಳದಲ್ಲೇ ಸಾವು

08:51 AM Jan 23, 2023 | Team Udayavani |

ಜೈಪುರ:  ಕಾರು – ಟ್ರಕ್‌ ನಡುವೆ ಭೀಕರ ಅಪಘಾತ ಸಂಭವಿಸಿ ಐವರು ಸ್ಥಳದಲ್ಲೇ ಮೃತಪಟ್ಟ ಘಟನೆ ಫತೇಪುರ್-ಸಲಾಸರ್ ರಸ್ತೆಯಲ್ಲಿ ಭಾನುವಾರ ರಾತ್ರಿ (ಜ.22 ರಂದು) ನಡೆದಿದೆ.

Advertisement

ಕಾರು – ಟ್ರಕ್‌ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿದ ಪರಿಣಾಮ ಕಾರಿನಲ್ಲಿದ್ದ ಐವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಮೃತಪಟ್ಟವರು ಹರಿಯಾಣ ಮೂಲದ  ನಿವಾಸಿಗಳೆಂದು ಎಂದು ತಿಳಿದು ಬಂದಿದೆ.

ಘಟನೆಯ ಬಗ್ಗೆ ಡೆಪ್ಯುಟಿ ಎಸ್​ಪಿ ರಾಜೇಶ್ ಕುಮಾರ್​ ಮಾಹಿತಿ ನೀಡಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.

ಇದನ್ನೂ ಓದಿ: ಕಾರಿಗೆ ಢಿಕ್ಕಿ ಹೊಡೆದು ಪಾದಚಾರಿಗಳ ಮೇಲೆ ಹರಿದ ಟ್ರಕ್:‌ 6 ಮಂದಿ ದಾರುಣ ಅಂತ್ಯ

Advertisement

Udayavani is now on Telegram. Click here to join our channel and stay updated with the latest news.

Next