ಚಿಕ್ಕಬಳ್ಳಾಪುರ: ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಬಸ್ ಹಾಗೂ ದ್ವಿಚಕ್ರ ವಾಹನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಮೃತ ಪಟ್ಟಿರುವ ಘಟನೆ ಜಿಲ್ಲೆಯ ಬಾಗೇಪಲ್ಲಿ ತಾಲೂಕಿ ಆಚೇಪಲ್ಲಿ ಕ್ರಾಸ್ ನಲ್ಲಿ ಮಂಗಳವಾರ ಬೆಳಗ್ಗೆ ನಡೆದಿದೆ.
ಮೃತ ವ್ಯಕ್ತಿಯನ್ನು ಪಾತಪಾಳ್ಯದ ನಿವಾಸಿ ವೆಂಕಟೇಶ (24) ಎಂದು ಗುರುತಿಸಲಾಗಿದೆ.
ಅಪಘಾತಕ್ಕೆ ಬಸ್ ಚಾಲಕನ ಅತಿವೇಗ ಹಾಗೂ ಅಜಾಗರೂಕತೆ ಕಾರಣ ಎಂದು ಹೇಳಲಾಗಿದೆ. ಅಪಘಾತದ ರಭಸಕ್ಕೆ ಬೈಕ್ ನಜ್ಜುಗುಜ್ಜಾಗಿದೆ.
ಬೈಕ್ ಸವಾರ ವೆಂಕಟೇಶ್ ಟ್ರ್ಯಾಕ್ಟರ್ ಚಾಲಕನಾಗಿದ್ದಾರೆ. ಮದುವೆಯಾಗಿ ಇಬ್ಬರು ಮಕ್ಕಳಿದ್ದಾರೆ. ಅಪಘಾತದ ವಿಷಯ ತಿಳಿದ ಕೂಡಲೇ ಬಾಗೇಪಲ್ಲಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.