ಮೈಸೂರು: ಎರಡು ಕಾರುಗಳ ನಡುವಿನ ಮುಖಾಮುಖಿ ಢಿಕ್ಕಿಯಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕಿನಲ್ಲಿ ನಡೆದಿದೆ.
ಕೇರಳದ ಕಂದಾಪುರ ತಾಲೂಕು ತಾಳಪುರಬಂನ ನಿವಾಸಿ ಮ್ಯಾಥ್ಯೂ (58) ಮತ್ತು ಆತನ ಪತ್ನಿ ಲಿಲ್ಲಿ ಕುಟ್ಟಿ (54) ಅಪಘಾತದಲ್ಲಿ ಮೃತಪಟ್ಟವರು.
ಹುಣಸೂರು ತಾಲೂಕಿನ ಹುಲ್ಲೇನಹಳ್ಳಿ ಗೇಟ್ ಬಳಿಯ ಹೆದ್ದಾರಿಯಲ್ಲಿ ಈ ಘಟನೆ ನಡೆದಿದೆ. ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿದ್ದು ಮೂವರಿಗೆ ಗಂಭೀರ ಗಾಯಗಳಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಮೈಸೂರಿನಿಂದ ಹುಣಸೂರು ಕಡೆಗೆ ಚಲಿಸುತ್ತಿದ್ದ ಸ್ವಿಫ್ಟ್ ಕಾರು ಮತ್ತು ಹುಣಸೂರು ಕಡೆಯಿಂದ ಮೈಸೂರು ಕಡೆಗೆ ಬರುತ್ತಿದ್ದ ಇನ್ನೋವಾ ಕಾರಿನ ನಡುವೆ ಢಿಕ್ಕಿ ಸಂಭವಿಸಿದೆ. ಸ್ವಿಫ್ಟ್ ಕಾರು ಡಿವೈಡರ್ ಹಾರಿ ಇನ್ನೋವಾ ಕಾರಿಗೆ ಡಿಕ್ಕಿ ಹೊಡೆದಿದೆ.
ಸ್ಥಳಕ್ಕೆ ಬಿಳಿಕೆರೆ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಈ ಕುರಿತು ಬಿಳಿಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.