Advertisement

ಶ್ರೀರಂಗಪಟ್ಟಣ ಲಾರಿ ಢಿಕ್ಕಿಯಾಗಿ ಸ್ಕೂಟರ್ ನಲ್ಲಿದ್ದ ಯುವತಿ ಸಾವು

03:03 PM Apr 09, 2022 | Team Udayavani |

ಶ್ರೀರಂಗಪಟ್ಟಣ: ಕಲ್ಲುತುಂಬಿದ ಲಾರಿಯೊಂದು ಢಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ನಲ್ಲಿ ತೆರಳುತ್ತಿದ್ದ ಯುವತಿ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಕೆ.ಆರ್.ಎಸ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶನಿವಾರ ನಡೆದಿದೆ.

Advertisement

ಪಾಂಡವಪುರ ತಾಲೂಕಿನ ಹರವು ಗ್ರಾಮದ ಸುಮತಿ(28) ಮೃತ ದುರ್ದೈವಿ.

ಇದನ್ನೂ ಓದಿ:ಸರ್ಕಾರಿ ಅಧಿಕಾರಿಗಳಂತೆ ನಟಿಸಿ 60 ಅಡಿ ಉದ್ದದ ಕಬ್ಬಿಣದ ಸೇತುವೆಯನ್ನೇ ಕದ್ದೊಯ್ದರು!

ಶ್ರೀರಂಗಪಟ್ಟಣ ತಾಲೂಕಿನ ಕೆ.ಆರ್.ಎಸ್ ಸಮೀಪವಿರುವ ಹಳೆ ಸಂತೇಮಾಳದ ಬಸ್ ನಿಲ್ದಾಣದ ಬಳಿ ಘಟನೆ ನಡೆದಿದ್ದು, ಮೃತ ಸುಮತಿ ಮೈಸೂರಿನ ಖಾಸಗಿ ಕಂಪನಿಯೊಂದರ ಉದ್ಯೋಗಿಯಾಗಿದ್ದು, ಕೆಲಸಕ್ಕೆ ತೆರಳುವ ವೇಳೆ ದುರ್ಘಟನೆ ನಡೆದಿದೆ. ಈ ಸಂಬಂಧ ಕೆ.ಆರ್.ಎಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next