Advertisement

ತಾಳಿಕೋಟೆ ಚಲಿಸುತ್ತಿದ್ದ ಟ್ರ್ಯಾಕ್ಟರ್ ಗೆ ಹಿಂದಿನಿಂದ ಬೈಕ್ ಡಿಕ್ಕಿ ಇಬ್ಬರ ಸಾವು

09:43 AM Nov 13, 2019 | sudhir |

ವಿಜಯಪುರ: ಚಲಿಸುತ್ತಿದ್ದ ಟ್ರ್ಯಾಕ್ಟರ್ ಗೆ ಹಿಂಬದಿಯಿಂದ ಬೈಕ್ ಡಿಕ್ಕಿಯಾಗಿ ಇಬ್ಬರು ಬೈಕ್ ಸವಾರರು ಸಾವಿಗೀಡಾಗಿರುವ ಘಟನೆ ಮಂಗಳವಾರ ಸಂಭವಿಸಿದೆ.

Advertisement

ಮೃತರನ್ನು ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಅಗ್ನಿ ಗ್ರಾಮದ ಪೂಜಪ್ಪ ಮಿಣಜಗಿ (38), ಭೀಮಣ್ಣ ಹುಲಿಮನಿ (42 ) ಎಂದು ಗುರುತಿಸಲಾಗಿದೆ.

ಅಪಘಾತದಲ್ಲಿ ಓರ್ವ ಬೈಕ್ ಸವಾರ ಸ್ಥಳದಲ್ಲಿ ಸಾವನ್ನಪಿದರೆ, ಮತ್ತೋರ್ವ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯದಲ್ಲಿ ಮೃತಪಟ್ಟಿದ್ದಾನೆ.

ತಾಳಿಕೋಟೆ ಪೊಲೀಸ್ ಠಾಣಾ ವ್ಯಾಪ್ತಿ ಘಟನೆ ಜರುಗಿದ್ದು, ಸುದ್ದಿ ತಿಳಿದು ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next