Advertisement

ಉಚ್ಚಿಲ: ಗ್ಯಾಸ್ ಸಿಲಿಂಡರ್ ಲಾರಿ ಮತ್ತು ಕಾರು ಡಿಕ್ಕಿ; ನಾಲ್ವರಿಗೆ ಗಾಯ

09:45 AM Sep 25, 2019 | keerthan |

ಕಟಪಾಡಿ: ರಾಷ್ಟ್ರೀಯ ಹೆದ್ದಾರಿ 66ರ ಉಚ್ಚಿಲದ ಪಣಿಯೂರು ಕ್ರಾಸ್ ಬಳಿ ಗ್ಯಾಸ್ ಸಿಲಿಂಡರ್ ತುಂಬಿದ್ದ ಲಾರಿ ಮತ್ತು ಕಾರುಗಳು ಮುಖಾಮುಖಿ ಡಿಕ್ಕಿಯಾದ ಘಟನೆ ಮಂಗಳವಾರ ಮುಂಜಾನೆ ನಡೆದಿದೆ.

Advertisement

ಅಪಘಾತದಲ್ಲಿ ಕಾರಿನಲ್ಲಿದ್ದ ನಾಲ್ವರು ಗಾಯಗೊಂಡಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ಸಾಗಿಸಲಾಗಿದೆ.

ತೀರ್ಥಹಳ್ಳಿಯಿಂದ ಮಂಗಳೂರಿಗೆ ಸಾಗುತ್ತಿದ್ದ ಗ್ಯಾಸ್ ಟ್ಯಾಂಕರ್ ಗೆ ಕಾರು ಡಿಕ್ಕಿ ಹೊಡೆದಿದೆ. ಪಣಿಯೂರು ರಸ್ತೆಯಿಂದ ಬರುತ್ತಿದ್ದ ಕಾರು ನೇರವಾಗಿ ಹೆದ್ದಾರಿಗೆ ನುಗ್ಗಿದ್ದೆ ಈ ಅಪಘಾತಕ್ಕೆ ಕಾರಣ ಎನ್ನಲಾಗಿದೆ.

 

Advertisement

Advertisement

Udayavani is now on Telegram. Click here to join our channel and stay updated with the latest news.

Next