Advertisement

ಉಪ್ಪಿನಂಗಡಿ: ಸಿಮೆಂಟ್ ಮಿಕ್ಸರ್ ವಾಹನ- ಬೈಕ್ ನಡುವೆ ರಸ್ತೆ ಅಪಘಾತ, ಮಹಿಳೆ ಸಾವು

02:32 PM Feb 05, 2021 | Team Udayavani |

ಉಪ್ಪಿನಂಗಡಿ: ರಾಷ್ಟ್ರೀಯ ಹೆದ್ದಾರಿ 75ರ ಉಪ್ಪಿನಂಗಡಿಯಲ್ಲಿ ಸಿಮೆಂಟ್ ಮಿಕ್ಸರ್ ವಾಹನ ಮತ್ತು ಬೈಕ್ ನಡುವಿನ ರಸ್ತೆ ಅಪಘಾತದಲ್ಲಿ ಬೈಕ್ ಸಹ ಸವಾರೆ ಮಹಿಳೆ ಮೃತಪಟ್ಟ ಘಟನೆ ಶುಕ್ರವಾರ ನಡೆದಿದೆ.

Advertisement

ಮೃತಪಟ್ಟ ಮಹಿಳೆಯನ್ನು ಸರಳಿಕಟ್ಟೆ ನಿವಾಸು ಸಖಿನಾ ಎಂದು ಗುರುತಿಸಲಾಗಿದೆ. ಇವರ ಪತಿ ರಫೀಕ್ ಅವರಿಗೂ ಗಾಯಗಳಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ.

ಇದನ್ನೂ ಓದಿ:ಶಿರಾಡಿ ಘಾಟ್ ಎರಡನೇ ತಿರುವಿನಲ್ಲಿ ಮಗುಚಿ ಬಿದ್ದ ಗ್ಯಾಸ್ ಟ್ಯಾಂಕರ್: ಸಂಚಾರ ಸ್ಥಗಿತ

ಉಪ್ಪಿನಂಗಡಿಯ ಆದಿತ್ಯ ಹೋಟೆಲ್ ಬಳಿ ಘಟನೆ ನಡೆದಿದೆ. ಸಿಮೆಂಟ್ ಮಿಕ್ಸರ್ ವಾಹನವು ಬಿ.ಸಿ.ರೋಡ್ ನಿಂದ ಉದನೆ ಕಡೆಗೆ ಹೋಗುತ್ತಿತ್ತು. ಈ ವೇಳೆ ಢಿಕ್ಕಿ ಸಂಭವಿಸಿದೆ.

ಪುತ್ತೂರು ಸಂಚಾರ ಠಾಣೆ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದರು.

Advertisement

ಇದನ್ನೂ ಓದಿ: ಸ್ಥಳೀಯರಿಗೆ ಉದ್ಯೋಗದಲ್ಲಿ ಪ್ರಾಶಸ್ತ್ಯ: ಸದನದಲ್ಲಿ ಶಾಸಕ ಡಾ.ಭರತ್ ಶೆಟ್ಟಿ ಒತ್ತಾಯ

Advertisement

Udayavani is now on Telegram. Click here to join our channel and stay updated with the latest news.

Next