Advertisement

Panaji: ಅನ್ಮೋದ್ ಘಾಟ್‍ನಲ್ಲಿ ಭಾರಿ ಭೂಕುಸಿತ… ವಾಹನ ಸಂಚಾರ ಸ್ಥಗಿತ

05:13 PM Jul 19, 2024 | Team Udayavani |

ಪಣಜಿ: ಕಳೆದ ಕೆಲ ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಭಾರಿ ಮಳೆಗೆ ಕಾರವಾರದಂತೆಯೇ ಗೋವಾದಲ್ಲಿಯೂ ಭೂಕುಸಿತ ಉಂಟಾಗಿರುವ ಬಗ್ಗೆ ವರದಿಯಾಗಿದೆ.

Advertisement

ದೂಧ್ ಸಾಗರ ದೇವಸ್ಥಾನದ ಸಮೀಪವಿರುವ ಅನ್ಮೋದ್ ಘಾಟ್‍ನಲ್ಲಿ ಭಾರಿ ಪ್ರಮಾಣದಲ್ಲಿ ಭೂಕುಸಿತವುಂಟಾಗಿದೆ. ಇಡೀ ರಸ್ತೆಯಲ್ಲಿ ಮಣ್ಣು ಹರಡಿರುವುದರಿಂದ ಈ ರಸ್ತೆಯಲ್ಲಿ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಅನಮೋಡ ಘಾಟ್ ರಸ್ತೆಯು ಗೋವಾ ಮತ್ತು ಬೆಳಗಾವಿ ಸಂಪರ್ಕಿಸುವ ಪ್ರಮುಖ ರಸ್ತೆಯಾಗಿದೆ.

ಪಶ್ಚಿಮಘಟ್ಟದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಹಲವೆಡೆ ಭೂಕುಸಿತ ಉಂಟಾಗುತ್ತಿದೆ. ಸದ್ಯ ಅನ್ಮೋದ್ ಘಾಟ್ ರಸ್ತೆಯಲ್ಲಿ ಗುಡ್ಡ ಕುಸಿತದಿಂದಾಗಿ ಈ ಮಾರ್ಗವನ್ನು ತಾತ್ಕಾಲಿಕವಾಗಿ ಸಂಚಾರಕ್ಕೆ ಬಂದ್ ಮಾಡಲಾಗಿದೆ. ಈ ಮಾರ್ಗದಲ್ಲಿ ಭಾರಿ ವಾಹನಗಳ ಸಂಚಾರ ಬಂದ್ ಆಗಿರುವುದರಿಂದ ವಾಹನಗಳ ಸಂಚಾರ ಕಡಿಮೆಯಾಗಿದೆ. ಹೀಗಾಗಿ ವಾಹನ ಸಂಚಾರಕ್ಕೆ ಹೆಚ್ಚಿನ ತೊಂದರೆಯಾಗಿಲ್ಲ. ಸದ್ಯ ಬೆಳಗಾವಿ ಮಾರ್ಗಕ್ಕೆ ತೆರಳುವ ಹೆಚ್ಚಿನ ವಾಹನಗಳು ಚೋರ್ಲಾ ಘಾಟ್ ಮಾರ್ಗವಾಗಿ ಸಂಚರಿಸುತ್ತಿದೆ.

ಇದನ್ನೂ ಓದಿ: Chikkamagaluru: ಮಹಾಮಳೆಗೆ ರಾಕ್ಷಸ ಸ್ವರೂಪ ಪಡೆದಿರೋ ಕಲ್ಲತ್ತಿಗರಿ ಜಲಪಾತ

Advertisement

Udayavani is now on Telegram. Click here to join our channel and stay updated with the latest news.

Next