Advertisement

ರಸ್ತೆ ನಿರ್ಮಾಣ ಕಾಮಗಾರಿಗಳಿಗೆ ಚಾಲನೆ

04:13 PM Jan 03, 2020 | Team Udayavani |

ಹಿರೇಕೆರೂರ: ರಟ್ಟಿಹಳ್ಳಿ ತಾಲೂಕಿನ ಮೇದೂರು, ಹೊಸಕಟ್ಟಿ, ಕಿರಗೇರಿ,ಪುರದಗೇರಿ ಗ್ರಾಮಗಳ ಪರಿಶಿಷ್ಟ ಪಂಗಡ ಕಾಲೋನಿಗಳಲ್ಲಿ ಲೋಕೋಪಯೋಗಿ ಇಲಾಖೆಯಿಂದ ಕಾಂಕ್ರಿಟ್‌ ರಸ್ತೆ ನಿರ್ಮಾಣ ಕಾಮಗಾರಿಗಳಿಗೆ ಶಾಸಕ ಬಿ.ಸಿ.ಪಾಟೀಲ ಹಾಗೂ ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷ ಯು.ಬಿ.ಬಣಕಾರ ಭೂಮಿಪೂಜೆ ನೆರವೇರಿಸಿದರು.

Advertisement

ಈ ವೇಳೆ ಮಾತನಾಡಿದ ಶಾಸಕ ಬಿ.ಸಿ.ಪಾಟೀಲ, ಗ್ರಾಮೀಣ ಪ್ರದೇಶಗಳು ಅಭಿವೃದ್ಧಿಯಾದಾಗ ಮಾತ್ರ ದೇಶದ ಅಭಿವೃದ್ಧಿ ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ಗ್ರಾಮೀಣ ಜನತೆಗೆ ಮೂಲ ಸೌಕರ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಸರ್ಕಾರಗಳು ಹತ್ತು ಹಲವು ಯೋಜನೆಗಳನ್ನು ಜಾರಿಗೊಳಿಸಿ ಹಳ್ಳಿಗಳ ಅಭಿವೃದ್ಧಿಗೆ ಒತ್ತು ನೀಡುತ್ತಿವೆ. ಸರ್ಕಾರದ ಎಲ್ಲ ಯೋಜನೆಗಳನ್ನು ಸದ್ಬಳಕೆ ಮಾಡಿಕೊಂಡು ಗ್ರಾಮಗಳ ಸರ್ವತೋಮುಖ ಅಭಿವೃದ್ಧಿಪಡಿಸಿಕೊಳ್ಳಬೇಕು ಎಂದರು. ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷ ಹಾಗೂ ಮಾಜಿ ಶಾಸಕ ಯು.ಬಿ.ಬಣಕಾರ ಮಾತನಾಡಿ, ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಗೆ ಮೂಲ ಸೌಕರ್ಯಗಳನ್ನು ಒದಗಿಸುವ ಈ ನಿಟ್ಟಿನಲ್ಲಿ ಸರ್ಕಾರ ಜಾರಿಗೊಳಿಸಿದ ಎಲ್ಲ ಯೋಜನೆಗಳನ್ನು ಪ್ರಯೋಜನ ಪಡೆದುಕೊಳ್ಳಬೇಕು. ತಾಲೂಕಿನ ಸಣ್ಣಗುಬ್ಬಿ ಗ್ರಾಮದಲ್ಲಿ ಮಾದರಿ ಸಂಜೀವಿನಿ ಶೆಡ್‌ ನಿರ್ಮಾಣವಾಗಿದೆ. ಅದರಂತೆ ಪ್ರತಿಯೊಂದು ಗ್ರಾಪಂ ವ್ಯಾಪ್ತಿಯಲ್ಲಿ ಸಂಜೀವಿನಿ ಶೆಡ್‌ ನಿರ್ಮಾಣವಾಗಬೇಕು. ಈ ಬಗ್ಗೆ ಅಧಿಕಾರಿಗಳು ಗಮನಹರಿಸಬೇಕು ಎಂದರು.

ತಾಪಂ ಅಧ್ಯಕ್ಷ ರಾಜು ಬಣಕಾರ, ಸದಸ್ಯರಾದ ಗೀತಾ ಧನವಿನವರ, ಸುಜತಾ ಕೊಟಗಿಮನಿ, ಇಒ ಮೋಹನ್‌ಕುಮಾರ, ಎಇಇ ಎಸ್ .ವಿ. ಪುರಾಣಿಕ್‌, ಗ್ರಾ ಪಂ ಅಧ್ಯಕ್ಷರಾದ ಮಹೇಶ, ಅನೀತಾ ಜಯಪ್ರಕಾಶ ಮಳಗಿ, ಮುಖಂಡರಾದ ಪಾಲಕ್ಷಗೌಡ ಪಾಟೀಲ, ಹನುಮಂತಗೌಡ ಭರಮಣ್ಣನವರ, ಭರಮಗೌಡ ಪಾಟೀಲ್‌, ಶಶಿಧರ ತೋಟದ, ರಾಜು ಊದಗೌಡ್ರ ಮಲ್ಲಪ್ಪ ಕೊಟಗಿಮನಿ, ರಂಗಪ್ಪ ಕೊಟಗಿಮನಿ, ಸಿದ್ದಪ್ಪ ಸೊಂಟೇರ, ರವಿ ಚಿಂದಿ, ಸೇರಿದಂತೆ ಸ್ಥಳೀಯ ಜನಪ್ರತಿನಿ ಧಿಗಳು ಹಾಗೂ ಗ್ರಾಮಸ್ಥರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next