Advertisement
ಮೈಸೂರು – ಬೆಂಗಳೂರು ದಶಪಥ ರಸ್ತೆಯ ಕಾಮಗಾರಿ ವೀಡಿಯೋ ಮಾಡಿದ್ದು ಇಷ್ಟು ಜನರ ಹೊಟ್ಟೆಗೆ ಬೆಂಕಿ ಬೀಳಿಸುತ್ತದೆಯೆಂದು ಗೊತ್ತಿರಲಿಲ್ಲ. ಮೋದಿ ಸರಕಾರ ಈ ಯೋಜನೆಗೆ ಹಣ ಬಿಡುಗಡೆ ಕಾಮಗಾರಿ ಚಾಲನೆ ನೀಡಲಾಗಿತ್ತು 8,666 ಕೋಟಿ ರೂ ಪ್ರಾಜೆಕ್ಟ್ ನಲ್ಲಿ 8 ಪೈಸೆನಾದರೂ ವಿಶ್ವನಾಥ್ ಅವರು ಬಿಡುಗಡೆ ಮಾಡಿಸಿದ್ದರಾ? ಸಿದ್ದರಾಮಯ್ಯ ಅವರು ಬಿಡುಗಡೆ ಮಾಡಿದ್ದಾರ? ನಿತಿನ್ ಗಡ್ಕರಿ ನಮ್ಮ ಕೇಂದ್ರ ಸರಕಾರದ ಮಂತ್ರಿ ಮೋದಿ ಅವರ ಆಡಳಿತದಲ್ಲಿ ಶುರುವಾಗುವ ಪ್ರಾಜೆಕ್ಟ್ ಗಳು ಮೋದಿ ಸರಕಾರಕ್ಕೆ ಸಲ್ಲಬೇಕು ಎಂದರು.
Related Articles
Advertisement
ಮಾಜಿ ಸಚಿವ ಮಹದೇವಪ್ಪ ಅವರೇ ನೀವು ನಿಮ್ಮ ಅವಧಿಯಲ್ಲಿ ಮಾಡಿದ ಒಂದು ರಸ್ತೆ ನೆಟ್ಟಗಿದ್ದಿಯಾ ಸರ್? ನಿಮಗೆ ದಶಪಥ ರಸ್ತೆಯ ಕ್ರೆಡಿಟ್ ಬೇಕಾ? ನೀವು ಹಿರಿಯರು. ನೀವು ಮಾರ್ಗದರ್ಶನ ಮಾಡಿ ಸರ್. ಬೀದಿ ಜಗಳಕ್ಕೆ ಇಳಿಯಬೇಡಿ ಎಂದರು.
ದಶಪಥ ರಸ್ತೆ ಕ್ರೆಡಿಟ್ ಭಾರತ ಮಾತೆಗೆ ಸೇರಿದ್ದು ಎಂಬ ಶಾಸಕ ರಾಮದಾಸ್ ಗೂ ಸಂಸದ ಪ್ರತಾಪ್ ಸಿಂಹ ವ್ಯಂಗ್ಯವಾಗಿ ತಿರುಗೇಟು ನೀಡಿದರು. ಮೋದಿ ಅವರು ಭಾರತ ಮಾತೆಯ ಸುಪುತ್ರ. ಅವರು ಮಾಡುವ ಎಲ್ಲಾ ಕೆಲಸವೂ ಭಾರತ ಮಾತೆಗೆ ಸೇರಿದ್ದು. ಕ್ಷೇತ್ರದಲ್ಲಿ ಮಾಡುವ ಕೆಲಸ ಭಾರತ ಮಾತೆಗೆ ಸೇರಿದ್ದು ಎಂದು ಹೇಳುವ ಕಾಲ ಈಗ ಬಂತಲ್ಲ ನನಗೆ ಸಂತೋಷವಾಗಿದೆ. ರಾಮದಾಸ್ ಅವರ ಕೆ.ಆರ್. ಕ್ಷೇತ್ರದಲ್ಲಿ ದಶಕಗಳಿಂದ ಬಿದ್ದಿರು ಕಸವನ್ನು ಸ್ವಚ್ಚ ಮಾಡುವ ಕೆಲಸವನ್ನು ನಾನೇ ಮಾಡುತ್ತಿದ್ದೇನೆ. ಅದರ ಕ್ರೆಡಿಟ್ ಕೂಡ ಭಾರತ ಮಾತೆಗೆ ಸೇರಿದ್ದಾಗುತ್ತದೆ ಎಂದರು.