Advertisement

11 ಕೋಟಿ ರೂ. ಅನುದಾನದಲ್ಲಿ ರಸ್ತೆ ಅಭಿವೃದ್ದಿ

12:42 PM Jun 25, 2022 | Team Udayavani |

ಚಿಂಚೋಳಿ: ತಾಲೂಕಿನಲ್ಲಿ ಹದಗೆಟ್ಟಿ ರುವ ರಸ್ತೆಗಳ ಡಾಂಬರೀ ಕರಣ ಮತ್ತು ಕೆಟ್ಟು ಹೋಗಿರುವ ಸೇತುವೆ ನಿರ್ಮಾಣ ಅಭಿವೃದ್ಧಿ ಕಾಮಗಾರಿಗಳು ಭರದಿಂದ ನಡೆಯತ್ತಿವೆ.

Advertisement

ತಾಲೂಕಿನ ನರನಾಳ, ಚಿಮ್ಮನ ಚೋಡ, ಸಲಗರ ಬಸಂತಪುರ, ಚೌಕಿತಾಂಡಾದ ಹತ್ತಿರ ರಸ್ತೆಗಳು ತುಂಬಾ ಹದಗೆಟ್ಟಿದ್ದರಿಂದ ಶಾಸಕ ಡಾ|ಅವಿನಾಶ ಜಾಧವ ಮುತುವರ್ಜಿ ವಹಿಸಿ ರಸ್ತೆ ಡಾಂಬರೀಕರಣ ಮತ್ತು ಸೇತುವೆ ಅಭಿವೃದ್ಧಿ ಕಾಮಗಾರಿಗಳಿಗೆ ಕೆಕೆಆರ್‌ಡಿಬಿ ವತಿಯಿಂದ ಪ್ರಸಕ್ತ ಸಾಲಿನಲ್ಲಿ 11ಕೋಟಿ ರೂ. ಅನುದಾನ ಮಂಜೂರಿಗೊಳಿಸಿದ್ದಾರೆ.

ಹೀಗಾಗಿ ರಸ್ತೆ ಅಭಿವೃದ್ಧಿ ಕೆಲಸಗಳು ಭರದಿಂದ ನಡೆಯುತ್ತಿವೆ. ಚಿಮ್ಮನಚೋಡ ಹತ್ತಿರ ರಸ್ತೆ ಅಭಿವೃದ್ಧಿಗೆ ವಿಶೇಷ ಅಭಿವೃದ್ಧಿ ಯೋಜನೆ ಅಡಿಯಲ್ಲಿ 2.9 ಕಿಮೀ ರಸ್ತೆ ಮತ್ತು ಸೇತುವೆ ನಿರ್ಮಾಣಕ್ಕೆ 5ಕೋಟಿ ರೂ. ಖರ್ಚು ಮಾಡಲಾಗುತ್ತಿದೆ. ಹೊಸ ರಸ್ತೆ ಡಾಂಬರೀಕರಣ ಕಾಮಗಾರಿ 2.2ಕಿಮೀ ಪೂರ್ಣ ಗೊಂಡಿದೆ. ಚಿಮ್ಮನಚೋಡ ಗ್ರಾಮದ ಹತ್ತಿರ ಸೇತುವೆ ನಿರ್ಮಾಣ ಮತ್ತು 2.50ಕಿಮೀ ರಸ್ತೆ ಡಾಂಬರೀಕರಣ ನಡೆಯುತ್ತಿದೆ. ಹೊಸ ರಸ್ತೆ ನಿರ್ಮಿ ಸಲು ಕೆಕೆಆರ್‌ಡಿಬಿ ಯೋಜನೆ ಅಡಿಯಲ್ಲಿ 5ಕೋಟಿ ರೂ. ಅನುದಾನ ಮಂಜೂರಿಗೊಳಿಸಲಾಗಿದೆ.

ನರನಾಳ ಗ್ರಾಮದ ಹತ್ತಿರ 1.3ಕಿಮೀ ರಸ್ತೆ ಡಾಂಬರೀಕರಣಕ್ಕೆ ಒಂದು ಕೋಟಿ ರೂ. ಮಂಜೂರಿಯಾಗಿದ್ದು, ಒಟ್ಟು 7ಕಿಮೀ ರಸ್ತೆ ಡಾಂಬರೀಕರಣ ಮತ್ತು ಸೇತುವೆ, ಸಿಮೆಂಟ್‌ ರಸ್ತೆ ನಿರ್ಮಾಣ ಕಾರ್ಯ ನಡೆಯುತ್ತಿದೆ.

ಚಿಂಚೋಳಿ ತಾಲೂಕಿನಲ್ಲಿ ರಸ್ತೆ ಸುಧಾರಣೆ ಮತ್ತು ಡಾಂಬರೀಕರಣ ಕಾಮಗಾರಿಗಳು, ನೂತನ ಸೇತುವೆ ನಿರ್ಮಾಣ, ಸಿಮೆಂಟ್‌ ರಸ್ತೆ ಕಾಮಗಾರಿಗೆ ಶಾಸಕ ಡಾ| ಅವಿನಾಶ ಜಾಧವ ಕೆಕೆಆರ್‌ಡಿಬಿಯಿಂದ ಅನುದಾನ ಮಂಜೂರಿ ಮಾಡಿಸಿದ್ದರಿಂದ ಎಲ್ಲ ಕಾಮಗಾರಿಗಳು ಗುಣಮಟ್ಟದಿಂದ ನಡೆಯುತ್ತಿವೆ. ಎಲ್ಲ ಕಾಮಗಾರಿಗಳು ಪೂರ್ಣಗೊಳ್ಳುವ ಹಂತಕ್ಕೆ ತಲುಪಿದ್ದು, ಜುಲೈ ಅಂತ್ಯದವರೆಗೆ ಪೂರ್ಣಗೊಳಿಸಲಾಗುವುದು. -ಆನಂದ ಕಟ್ಟಿ, ಎಇಇ, ಲೋಕೋಪಯೋಗಿ ಇಲಾಖೆ

Advertisement
Advertisement

Udayavani is now on Telegram. Click here to join our channel and stay updated with the latest news.

Next