Advertisement

“11.5 ಕೋಟಿ ರೂ.ವೆಚ್ಚದಲ್ಲಿಕಾಲೋನಿಗಳ ರಸ್ತೆ ಅಭಿವೃದ್ಧಿ’

12:04 PM Aug 05, 2017 | Team Udayavani |

ದೇವನಹಳ್ಳಿ: ಮೀಸಲು ಕ್ಷೇತ್ರವಾಗಿರುವುದರಿಂದ ಎಸ್‌ಸಿಪಿ, ಟಿಎಸ್‌ಪಿ ಯೋಜನೆಯಡಿಯಲ್ಲಿ ಹೆಚ್ಚಿನ ಅನುದಾನ ಬರುತ್ತದ್ದು, ಅದರಲ್ಲಿ 11.5 ಲಕ್ಷ ರೂ. ವೆಚ್ಚದಲ್ಲಿ ಕಾಂಕ್ರೀಟ್‌ ರಸ್ತೆ ಕಾಮಗಾರಿಗೆ ಚಾಲನೆ ನೀಡಲಾಗಿದೆ ಎಂದು ಶಾಸಕ ಪಿಳ್ಳಮುನಿಶಾಮಪ್ಪ ತಿಳಿಸಿದರು.

Advertisement

ತಾಲೂಕಿನ ಮಜ್ಜಿಗೆ ಹೊಸಹಳ್ಳಿ ಗ್ರಾಮದಲ್ಲಿ ಎಸ್‌ಸಿಪಿ, ಟಿಎಸ್‌ಪಿ ಯೋಜನೆಯಡಿಯಲ್ಲಿ ಕಾಂಕ್ರೀಟ್‌ ರಸ್ತೆ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಅವರು,  ಪ್ರತಿಯೊಂದು ಕಾಲೋನಿಯಲ್ಲಿ ರಸ್ತೆ ಅಭಿವೃದ್ಧಿಯಾಗಬೇಕು. ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ 216 ಗ್ರಾಮಗಳ ಬಹುತೇಕ ಪರಿಶಿಷ್ಟರ ಬಡಾವಣೆಗಳಲ್ಲಿ ಕಳೆದ 4 ವರ್ಷಗಳಲ್ಲಿ ಸಮಾಜ ಕಲ್ಯಾಣ ಇಲಾಖೆಯ 12 ಕೋಟಿ ರೂ. ಅನುದಾನದಲ್ಲಿ ರಸ್ತೆ ಆಧುನೀಕರಣಗೊಳಿಸಲಾಗಿದೆ ಎಂದು ವಿವರಿಸಿದರು.

ಗ್ರಾಮಸ್ಥರು ಬಗರ್‌ಹುಕುಂ ಸಾಗುವಳಿ ಪತ್ರ ನೀಡಲು ಒತ್ತಾಯ ಮಾಡಿದ್ದು, ಈಗಾಗಲೇ ಸಮಿತಿಯಲ್ಲಿ ಪರಿಶೀಲಿಸಿ ಅನುಮೋದನೆಯನ್ನು ನೀಡಿ ಹಕ್ಕುಪತ್ರ ನೀಡುವುದೊಂದೇ ಬಾಕಿ ಇದೆ. ಬಗರ್‌ಹುಕುಂ ಸಾಗುವಳಿಯಲ್ಲಿ ಬಿಬಿಎಂಪಿ ವ್ಯಾಪ್ತಿಯಿಂದ 18 ಕಿ.ಮೀ. ನೀಡಬಾರದೆಂಬ ಷರತ್ತು ಇದ್ದು, ಮುಖ್ಯಮಂತ್ರಿಗಳು ಬರುವ ಸಂದರ್ಭದಲ್ಲಿ 18 ಕಿ.ಮೀ. ವ್ಯಾಪ್ತಿಯನ್ನು ಸಡಿಲಗೊಳಿಸಲು ಮನವಿ ಸಲ್ಲಿಸಲಾಗುವುದು. ಗ್ರಾಮಗಳು ಅಭಿವೃದ್ಧಿ ಹೊಂದರೆ ಮಾತ್ರ ರಾಜ್ಯದ ಸರ್ವತೋಮುಖ ಅಭಿವೃದ್ಧಿ ಸಾಧ್ಯ.

ಕಟ್ಟಕಡೆಯ ವ್ಯಕ್ತಿಗೂ ಸೌಲಭ್ಯ ದೊರೆತು ಸಮಾಜದ ಮುಖ್ಯ ವಾಹಿನಿಗೆ ಬರಬೇಕು ಎಂದು ಹೇಳಿದರು. ಜಿಲ್ಲಾ ಕಾಂಗ್ರೆಸ್‌ ಎಸ್‌ಟಿ ವಿಭಾಗದ ಅಧ್ಯಕ್ಷ ವಿ.ಎನ್‌.ವೆಂಕಟೇಶ್‌ ಮಾತನಾಡಿ, ಗ್ರಾಮದಿಂದ ನಂದಿಬೆಟ್ಟ ರಸ್ತೆಯವರೆಗೆ ಚರಂಡಿ ಕಾಮಗಾರಿಗೆ ಅನುದಾನ ನೀಡಬೇಕು. ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಯೋಜನಾ ಪ್ರಾಧಿಕಾರದಿಂದ ಅನುದಾನಕ್ಕೆ ಸೇರಿಸಲಾಗಿದೆ ಎಂದು ಹೇಳಿದರು.

ರೈತರ ಮನವಿ: ಮೂಡಿಗಾನಹಳ್ಳಿ ಸರ್ವೆ ನಂ. 40, ಕೆಂಪತಿಮ್ಮನಹಳ್ಳಿ ಸರ್ವೆ ನಂ.25ರಲ್ಲಿ 30 ರೈತರು ಸಾಗುವಳಿ ಮಾಡಿಕೊಂಡು ಬಂದಿದ್ದು, ಆ ಜಾಗಗಳಿಗೆ ಸಾಗುವಳಿ ಪತ್ರ ನೀಡುವಂತೆ ಶಾಸಕರಿಗೆ ರೈತರು ಮನವಿ ಮಾಡಿದರು.

Advertisement

ತಾಪಂ ಸದಸ್ಯ ಕಾರಹಳ್ಳಿ ಶ್ರೀನಿವಾಸ್‌ ಮಾತನಾಡಿ, ಗ್ರಾಮಗಳ ಅಭಿವೃದ್ಧಿಗೆ ಹೆಚ್ಚಿನ ಒತ್ತನ್ನು ಶಾಸಕರು ನೀಡುತ್ತಿದ್ದಾರೆ. ಈಗಾಗಲೇ ತೈಲಗೆರೆ ಹಾಗೂ ಮೀಸಗಾನಹಳ್ಳಿ ಗ್ರಾಮಗಳ ಮಧ್ಯದ ಮುಖ್ಯ ರಸ್ತೆಯಲ್ಲಿ 60 ಲಕ್ಷ ರೂ. ವೆಚ್ಚದ ಸೇತುವೆ ನಿರ್ಮಾಣ, ಕಾರಹಳ್ಳಿ ಗ್ರಾಮದಲ್ಲಿ 12 ಲಕ್ಷ ರೂ. ವೆಚ್ಚದಲ್ಲಿ ಕಾಂಕ್ರೀಟ್‌ ರಸ್ತೆ ಕಾಮಗಾರಿಗೆ ಚಾಲನೆ ನೀಡುತ್ತಿದ್ದಾರೆ. ಹೀಗೆ ಪ್ರತಿ ಹಳ್ಳಿಗೂ ಕಾಮಗಾರಿ ನೀಡಿ ಅಭಿವೃದ್ಧಿ ಪಡಿಸುತ್ತಿದ್ದಾರೆ ಎಂದು ವಿವರಿಸಿದರು.

ಜಿಪಂ ಸದಸ್ಯೆ ರಾಧಮ್ಮ, ಗ್ರಾಪಂ ಅಧ್ಯಕ್ಷ ಎ.ದೇವರಾಜ್‌, ಉಪಾಧ್ಯಕ್ಷೆ ಆನಂದಮ್ಮ, ಪಿಕಾರ್ಡ್‌ ಬ್ಯಾಂಕ್‌ ಅಧ್ಯಕ್ಷ ಆರ್‌.ಮುನೇಗೌಡ, ತಾಲೂಕು ಜೆಡಿಎಸ್‌ ಅಧ್ಯಕ್ಷ ಬಿ.ಶ್ರೀನಿವಾಸ್‌, ಪ್ರಧಾನ ಕಾರ್ಯದರ್ಶಿ ಜಿ.ಎ.ರವೀಂದ್ರ, ವಿಎಸ್‌ಎಸ್‌ಎನ್‌ ನಿರ್ದೇಶಕ ಕೊಡಗುರ್ಕಿ ಮಹೇಶ್‌, ಮಂಜುನಾಥ್‌, ಗ್ರಾಪಂ ಸದಸ್ಯ ರಾಜೇಂದ್ರ, ರಾಮಾಂಜಿನಪ್ಪ, ರಮೇಶ್‌, ಮುಖಂಡ ಆರ್‌.ಭರತ್‌, ಮುನಿಕೃಷ್ಣಪ್ಪ, ರಾಜಣ್ಣ, ವೆಂಕಟೇಶ್‌, ಗೋವಿಂದಪ್ಪ ಮತ್ತಿತರರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next