Advertisement

ಕುಣಿಗಲ್ ಬಳಿ ಭೀಕರ ಅಪಘಾತ: ಸ್ಥಳದಲ್ಲೇ ಮೂವರು ಸಾವು: 6 ಮಂದಿ ಗಂಭೀರ

03:04 PM May 10, 2022 | Team Udayavani |

ಕುಣಿಗಲ್: ಕಾರು ಡಿವೈಡರ್‌ಗೆ ಢಿಕ್ಕಿ ಹೊಡೆದ ರಭಸಕ್ಕೆ, ಕಾರು ಹಾರಿ ಪಕ್ಕದ ರಸ್ತೆಯಲ್ಲಿ ಹೋಗುತ್ತಿದ್ದ ಟೆಂಪೋ ಟ್ರಾವಲ್ಸ್ ಗೆ ಅಪ್ಪಳಿಸಿದ ಪರಿಣಾಮ ಕಾರಿನಲ್ಲಿ ಪ್ರಯಾಣಿಸುತ್ತಿದ್ದ, ಮೂವರು ಸ್ಥಳದಲ್ಲೇ ಮೃತಪಟ್ಟು, 6 ಮಂದಿ ಗಂಭೀರವಾಗಿ ಗಾಯಗೊಂಡ ಘಟನೆ ಪಟ್ಟಣದ ಹೊರ ವಲಯದ ರಾಷ್ಟ್ರೀಯ ಹೆದ್ದಾರಿ 75 ಬಿ.ಎಂ ಬೇಗೂರು ಸಮೀಪ ಮಂಗಳವಾರ ಬೆಳಗಿನ ಜಾವ  ಸಂಭವಿಸಿದೆ.

Advertisement

ರಾಮಯ್ಯ, ರಘು (38), ಹೆಬ್ಬಾಳ ಬಿ.ಎಲ್ ಸರ್ಕಲ್ ನ ವಿಜಯ್ (36), ಹಾಗೂ ಸಂತೋಷ ಮೃತಪಟ್ಟ ದುರ್ದೈವಿಗಳು.

ಕಾರು ಚಾಲಕ ಲೋಕೇಶ್ ತೀವ್ರವಾಗಿ ಗಾಯಗೊಂಡು ಬೆಂಗಳೂರಿನ ಖಾಸಗಿ  ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ, ಟೆಂಪೋದಲ್ಲಿ ಪ್ರಯಾಣಿಸುತ್ತಿದ್ದ ವಸಂತ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ.

ಇದನ್ನೂ ಓದಿ:ವೈಯಕ್ತಿಕ ದ್ವೇಷಕ್ಕೆ ಪ್ರತಿಕಾರ ಯತ್ನ: ಐವರ ಸೆರೆ

Advertisement

ಘಟನೆ ವಿವರ:  ನಾಲ್ಕು ಮಂದಿ ಸ್ನೇಹಿತರು ಹಾಸನ ಕಡೆಗೆ ತೆರಳುತ್ತಿರಬೇಕಾದರೆ, ಚಾಲಕನ ನಿಯಂತ್ರಣ ತಪ್ಪಿ, ರಸ್ತೆಯ ಡಿವೈಡರ್‌ಗೆ ಢಿಕ್ಕಿ ಹೊಡೆದು, ಧರ್ಮಸ್ಥಳದಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದ ಟೆಂಪೋ ಟ್ರಾವಲ್ಸ್ ಗೆ ಅಪ್ಪಳಿಸಿದ ಕಾರಣ ಈ ಅವಘಡ ಸಂಭವಿಸಿದೆ ಎನ್ನಲಾಗಿದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next