Advertisement

ಉಡುಪಿ : ಕಾರು ಡಿಕ್ಕಿ ಹೊಡೆದು ಸ್ಕೂಟರ್ ಚಾಲಕ ಗಂಭೀರ

05:15 PM Dec 29, 2020 | sudhir |

ಉಡುಪಿ: ವೇಗವಾಗಿ ಬಂದ ಕಾರೊಂದು ಸ್ಕೂಟರ್ ಗೆ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಚಾಲಕ ಗಂಭೀರ ಗಾಯಗೊಂಡ ಘಟನೆ ಮಂಗಳವಾರ ಸಂಜೆ ಉಡುಪಿಯ ಎಂಜಿಎಂ ಕಾಲೇಜು ಬಳಿ ಸಂಭವಿಸಿದೆ.

Advertisement

ಮಹಾರಾಷ್ಟ್ರ ನೋಂದಣಿಯ ಕಾರು ಉಡುಪಿಯಿಂದ ಮಣಿಪಾಲದ ಕಡೆಗೆ ತೆರಳುತ್ತಿದ್ದ ಸಂದರ್ಭ ಎಂಜಿಎಂ ಕಾಲೇಜು ಬಳಿ ಎದುರಿನಿಂದ ಹೋಗುತ್ತಿದ್ದ ಸ್ಕೂಟರಿಗೆ ಡಿಕ್ಕಿ ಹೊಡೆದಿದೆ ಪರಿಣಾಮ ಸ್ಕೂಟರ್ ಸವಾರ ಗಂಭೀರ ಗಾಯಗೊಂಡಿದ್ದಾರೆ, ಕೂಡಲೇ ಅವರನ್ನು ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಡಿಕ್ಕಿ ಹೊಡೆದ ಬಳಿಕ ಕಾರು ನಿಯಂತ್ರಣ ತಪ್ಪಿ ರಸ್ತೆ ಬದಿಯ ಮಣ್ಣಿನ ದಿಬ್ಬಕ್ಕೆ ಗುದ್ದಿದೆ. ಅಪಘಾತದ ತೀವ್ರತೆಗೆ ದ್ವಿಚಕ್ರ ವಾಹನ ಸಂಪೂರ್ಣ ನುಜ್ಜುಗುಜ್ಜಾಗಿದೆ,

ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next